ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಮಿಕ
1. {ಜನರ ದುಷ್ಟತನವನ್ನು ನೋಡಿ ಮೀಕನಿಗಾದ ಬೇಸರ} [PS] ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; [QBR2] ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. [QBR] ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. [QBR2] ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ. [QBR]
2. ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. [QBR2] ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. [QBR] ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. [QBR2] ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ. [QBR]
3. ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. [QBR2] ಅಧಿಕಾರಿಗಳು ಲಂಚ ಕೇಳುತ್ತಾರೆ. [QBR] ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. [QBR2] “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. [QBR2] ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ. [QBR]
4. ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. [QBR2] ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. [QBR2] ನಿನ್ನ ಪ್ರವಾದಿಗಳ ದಿವಸವು ಬಂದದೆ. [QBR] ಈಗ ನೀನು ಶಿಕ್ಷಿಸಲ್ಪಡುವೆ. [QBR2] ನೀನು ಈಗ ಗಲಿಬಿಲಿಗೆ ಒಳಗಾಗುವೆ! [QBR]
5. {ಶಿಕ್ಷೆಯ ದಿನ ಬರುತ್ತಿದೆ} [PS] ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! [QBR2] ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! [QBR] ನಿನ್ನ ಹೆಂಡತಿಯೊಂದಿಗೂ [QBR2] ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ. [QBR]
6. ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. [QBR2] ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. [QBR] ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. [QBR2] ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.
7. {ಯೆಹೋವನೇ ರಕ್ಷಕನು} [PS] ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. [QBR2] ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. [QBR2] ನನ್ನ ದೇವರು ನನಗೆ ಕಿವಿಗೊಡುತ್ತಾನೆ. [QBR]
8. ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! [QBR2] ನಾನು ತಿರುಗಿ ಏಳುತ್ತೇನೆ; [QBR] ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. [QBR2] ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.
9. {ಯೆಹೋವನು ಕ್ಷಮಿಸುತ್ತಾನೆ} [PS] ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. [QBR2] ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. [QBR] ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. [QBR2] ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. [QBR] ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. [QBR2] ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು. [QBR]
10. “ನಿನ್ನ ದೇವರಾದ ಯೆಹೋವನು ಎಲ್ಲಿ?” [QBR2] ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. [QBR] ಆಗ ನಾನು ಅವರ ವಿಷಯವಾಗಿ ನಗಾಡುವೆನು; [QBR2] ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.
11. {ಯೆಹೂದ್ಯರು ಮರಳಿ ಬರುವರು} [PS] ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. [QBR2] ಆಗ ದೇಶವು ಬೆಳೆಯುವುದು. [QBR]
12. ನಿನ್ನ ಜನರು ದೇಶಕ್ಕೆ ಹಿಂತಿರುಗುವರು. [QBR2] ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. [QBR] ನಿನ್ನ ಜನರು ಈಜಿಪ್ಟಿನಿಂದಲೂ [QBR2] ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. [QBR] ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. [QBR2] ಪೂರ್ವದ ಪರ್ವತಗಳ ಕಡೆಯಿಂದ ಬರುವರು.
13. ದೇಶದಲ್ಲಿ ವಾಸಿಸಿದ್ದ ಜನರಿಂದಲೂ [QBR2] ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು. [QBR]
14. ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, [QBR2] ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. [QBR] ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; [QBR2] ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. [QBR] ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ [QBR2] ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.
15. {ಇಸ್ರೇಲ್ ತನ್ನ ವೈರಿಗಳನ್ನು ಸೋಲಿಸುವುದು} [PS] ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. [QBR2] ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು. [QBR]
16. ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. [QBR2] ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. [QBR] ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. [QBR2] ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು. [QBR]
17. ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. [QBR2] ಭಯದಿಂದ ನಡುಗುವರು. [QBR] ಅವರು ನೆಲದ ಮೇಲಿನ ಬಿಲಗಳಿಂದ [QBR2] ಹರಿದುಕೊಂಡು ಬರುವ ಹುಳಗಳಂತಿರುವರು. [QBR] ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು [QBR2] ನಿಮ್ಮನ್ನು ಭಯದಿಂದ ನೋಡುವರು.
18. {ಯೆಹೋವನಿಗೆ ಸ್ತೋತ್ರ} [PS] ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. [QBR2] ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. [QBR] ನಿನ್ನ ಜನಶೇಷವನ್ನು ಮನ್ನಿಸುವೆ. [QBR] ನೀನು ನಿತ್ಯಕ್ಕೂ ಕೋಪಿಸುವದಿಲ್ಲ. [QBR2] ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ. [QBR]
19. ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. [QBR2] ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು. [QBR]
20. ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. [QBR2] ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ. [PE]
ಒಟ್ಟು 7 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 7
1 2 3 4 5 6 7
ಜನರ ದುಷ್ಟತನವನ್ನು ನೋಡಿ ಮೀಕನಿಗಾದ ಬೇಸರ 1 ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ.
ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.
2 ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ.
ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.
3 ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ.
ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.
4 ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ.
ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!
ಶಿಕ್ಷೆಯ ದಿನ ಬರುತ್ತಿದೆ 5 ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ!
ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.
6 ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ.
ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.
ಯೆಹೋವನೇ ರಕ್ಷಕನು 7 ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.
8 ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ;
ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.
ಯೆಹೋವನು ಕ್ಷಮಿಸುತ್ತಾನೆ 9 ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ.
ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ.
ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.
10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು.
ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.
ಯೆಹೂದ್ಯರು ಮರಳಿ ಬರುವರು 11 ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು.
12 ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು.
ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು.
ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.
13 ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.
14 ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು.
ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ.
ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.
ಇಸ್ರೇಲ್ ತನ್ನ ವೈರಿಗಳನ್ನು ಸೋಲಿಸುವುದು 15 ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು.
16 ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು.
ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.
17 ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು.
ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು.
ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.
ಯೆಹೋವನಿಗೆ ಸ್ತೋತ್ರ 18 ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ.
ನಿನ್ನ ಜನಶೇಷವನ್ನು ಮನ್ನಿಸುವೆ.
ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.
19 ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.
20 ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.
ಒಟ್ಟು 7 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 7
1 2 3 4 5 6 7
×

Alert

×

Kannada Letters Keypad References