ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ನಹೂಮ
1. {ನಿನೆವೆಗೊಂದು ಕೆಟ್ಟ ಸುದ್ಧಿ} [PS] ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. [QBR2] ನಿನೆವೆಯು ಸುಳ್ಳಿನಿಂದ ತುಂಬಿದ ನಗರ. [QBR] ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. [QBR2] ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ. [QBR]
2. ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. [QBR2] ಚಕ್ರಗಳ ತಿರುಗುವ ಶಬ್ಧ, [QBR] ಕುದುರೆಗಳ ನಾಗಾಲೋಟವನ್ನು ಮತ್ತು [QBR2] ರಥಗಳ ಹಾರಾಟವನ್ನು ನೀವು ನೋಡಬಹುದು. [QBR]
3. ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. [QBR2] ಅವರ ಖಡ್ಗವು ಮಿಂಚುತ್ತದೆ. [QBR2] ಅವರ ಬರ್ಜಿಯು ಹೊಳೆಯುತ್ತದೆ, [QBR] ಬಹು ಮಂದಿ ಸತ್ತಿರುತ್ತಾರೆ. [QBR2] ಶವಗಳ ರಾಶಿ ಬಿದ್ದಿವೆ, ಅವು ಲೆಕ್ಕವಿಲ್ಲದಷ್ಟು ಇವೆ. [QBR2] ಅವುಗಳ ಮೇಲೆ ಜನರು ಎಡವಿಬೀಳುತ್ತಾರೆ. [QBR]
4. ಇದಕ್ಕೆಲ್ಲಾ ಕಾರಣ ನಿನೆವೆ. [QBR2] ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. [QBR2] ಆಕೆಗೆ ಹೆಚ್ಚುಹೆಚ್ಚು ಬೇಕು. [QBR] ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. [QBR2] ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.
5. ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: [QBR] “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. [QBR2] ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. [QBR] ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. [QBR2] ನಿನ್ನ ನಾಚಿಕೆಯನ್ನು ಅವರು ನೋಡಲಿ. [QBR]
6. ನಿನ್ನ ಮೇಲೆ ಹೊಲಸನ್ನು ಬಿಸಾಡುವೆನು. [QBR2] ನಿನ್ನನ್ನು ದ್ವೇಷದಿಂದ ಕಾಣುವೆನು. [QBR2] ಜನರು ನಿನ್ನನ್ನು ನೋಡಿ ನಗಾಡುವರು. [QBR]
7. ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. [QBR2] ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ [QBR2] ಎಂದು ಜನರು ಹೇಳುವರು. [QBR] ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?” [PS]
8. ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮಳೋ? ಇಲ್ಲ. ತೆಬೆಸಿನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು.
9. ಇಥಿಯೋಫಿಯಾ ಮತ್ತು ಈಜಿಪ್ಟ್ ತೆಬೆಸ್‌ಗೆ ಹೆಚ್ಚಿನ ಬಲವನ್ನು ಕೊಟ್ಟವು. ಸುದಾನ್ ಮತ್ತು ಲಿಬ್ಯ ಆಕೆಯನ್ನು ಸಹಕರಿಸಿದವು.
10. ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು. [PE][PS]
11. ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವರಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ.
12. ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು. [PE][PS]
13. ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ. [PE][PS]
14. ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೊ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೊ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೊ.
15. ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡತೆಗಳ ಹಿಂಡಿನಿಂದ ತಿಂದುಹಾಕಲ್ಪಟ್ಟ ದೇಶದಂತೆ ಕಾಣುವುದು. [PE][PS] ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡತೆಗಳ ಹಿಂಡಿನಂತಾದೆ. ನೀನು ಮಿಡತೆಗಳಂತಾದೆ.
16. ನಿನ್ನಲ್ಲಿ ಅನೇಕ ವ್ಯಾಪಾರಸ್ಥರು ಊರೂರಿಗೆ ತಿರುಗಿ ವ್ಯಾಪಾರ ಮಾಡುವವರಿದ್ದಾರೆ. ಅವರು ಆಕಾಶದಲ್ಲಿರುವ ನಕ್ಷತ್ರಗಳಷ್ಟು ಇದ್ದಾರೆ. ಅವರು ಮಿಡತೆಗಳಂತೆ ಬಂದು, ಎಲ್ಲವನ್ನು ತಿಂದು ಮುಗಿಸಿದ ಬಳಿಕ ಹೋಗುವಂಥವರಾಗಿದ್ದಾರೆ.
17. ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಆ ಮಿಡತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು. [PE][PS]
18. ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ಮತ್ತು ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ.
19. ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು. [PE]
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
ನಿನೆವೆಗೊಂದು ಕೆಟ್ಟ ಸುದ್ಧಿ 1 ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ.
ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ.
2 ಚಾವಟಿಯ ಚಟಾರವೆಂಬ ಶಬ್ಧವನ್ನು ನೀನು ಕೇಳಬಹುದು. ಚಕ್ರಗಳ ತಿರುಗುವ ಶಬ್ಧ,
ಕುದುರೆಗಳ ನಾಗಾಲೋಟವನ್ನು ಮತ್ತು ರಥಗಳ ಹಾರಾಟವನ್ನು ನೀವು ನೋಡಬಹುದು.
3 ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ,
ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ, ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿಬೀಳುತ್ತಾರೆ.
4 ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು.
ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.
5 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ:
“ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು.
ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ.
6 ನಿನ್ನ ಮೇಲೆ ಹೊಲಸನ್ನು ಬಿಸಾಡುವೆನು. ನಿನ್ನನ್ನು ದ್ವೇಷದಿಂದ ಕಾಣುವೆನು. ಜನರು ನಿನ್ನನ್ನು ನೋಡಿ ನಗಾಡುವರು.
7 ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು.
ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”
8 ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮಳೋ? ಇಲ್ಲ. ತೆಬೆಸಿನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು. 9 ಇಥಿಯೋಫಿಯಾ ಮತ್ತು ಈಜಿಪ್ಟ್ ತೆಬೆಸ್‌ಗೆ ಹೆಚ್ಚಿನ ಬಲವನ್ನು ಕೊಟ್ಟವು. ಸುದಾನ್ ಮತ್ತು ಲಿಬ್ಯ ಆಕೆಯನ್ನು ಸಹಕರಿಸಿದವು. 10 ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.
11 ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವರಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ. 12 ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು. 13 ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ. 14 ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೊ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೊ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೊ. 15 ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡತೆಗಳ ಹಿಂಡಿನಿಂದ ತಿಂದುಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡತೆಗಳ ಹಿಂಡಿನಂತಾದೆ. ನೀನು ಮಿಡತೆಗಳಂತಾದೆ. 16 ನಿನ್ನಲ್ಲಿ ಅನೇಕ ವ್ಯಾಪಾರಸ್ಥರು ಊರೂರಿಗೆ ತಿರುಗಿ ವ್ಯಾಪಾರ ಮಾಡುವವರಿದ್ದಾರೆ. ಅವರು ಆಕಾಶದಲ್ಲಿರುವ ನಕ್ಷತ್ರಗಳಷ್ಟು ಇದ್ದಾರೆ. ಅವರು ಮಿಡತೆಗಳಂತೆ ಬಂದು, ಎಲ್ಲವನ್ನು ತಿಂದು ಮುಗಿಸಿದ ಬಳಿಕ ಹೋಗುವಂಥವರಾಗಿದ್ದಾರೆ. 17 ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಆ ಮಿಡತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು. 18 ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ಮತ್ತು ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ. 19 ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
×

Alert

×

Kannada Letters Keypad References