ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ನೆಹೆಮಿಯ
1. {ನೆಹೆಮೀಯನ ಕಡೇ ಆಜ್ಞೆಗಳು} [PS] ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.
2. ಯಾಕೆಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲಿ ನೀರನ್ನಾಗಲಿ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು.
3. ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು. [PE][PS]
4. (4-5) ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು. [PE][PS]
5.
6. ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು.
7. ಎಲ್ಯಾಷೀಬನು ಟೋಬೀಯನಿಗೆ ನಮ್ಮ ದೇವರ ಆಲಯದ ಒಂದು ಕೋಣೆಯನ್ನು ಕೊಟ್ಟನೆಂಬ ದುಃಖದ ವಿಷಯವು ನನಗೆ ಜೆರುಸಲೇಮಿನಲ್ಲಿದ್ದಾಗ ತಿಳಿಯಿತು.
8. ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದೆನು.
9. ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು. [PE][PS]
10. ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.
11. ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು.
12. ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು. [PE][PS]
13. ಯಾಜಕನಾದ ಶೆಲೆಮ್ಯನನ್ನೂ ಬೋಧಕನಾದ ಚಾದೋಕನನ್ನೂ ಪೆದಾಯ ಎಂಬ ಲೇವಿಯನನ್ನೂ ಉಗ್ರಾಣಗಳಿಗೆ ಮುಖ್ಯಸ್ತರನ್ನಾಗಿ ಮಾಡಿದೆನು. ಮತ್ತನ್ಯನ ಮೊಮ್ಮಗನೂ ಜಕ್ಕೂರನ ಮಗನೂ ಆಗಿರುವ ಹಾನಾನನನ್ನು ಅವರಿಗೆ ಸಹಾಯಕನನ್ನಾಗಿ ನೇಮಿಸಿದೆನು. ಇವರು ನಂಬಿಗಸ್ತರಾಗಿದ್ದರು. ತಮ್ಮ ಜನರಿಗೆ ಬೇಕಾದ ದವಸವನ್ನು, ಆಹಾರಸಾಮಾಗ್ರಿಗಳನ್ನು ಒದಗಿಸುವ ಕಾರ್ಯಕ್ಕೆ ಅವರು ಜವಾಬ್ದಾರರಾಗಿದ್ದರು. [PE][PS]
14. ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು. [PE][PS]
15. ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು. [PE][PS]
16. ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡುಕೊಳ್ಳುತ್ತಿದ್ದರು.
17. ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.
18. ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು. [PE][PS]
19. ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು. [PE][PS]
20. ಒಂದೆರಡು ಬಾರಿ ವ್ಯಾಪಾರಸ್ತರು ನಗರದ ಹೊರಗಡೆಯೇ ರಾತ್ರಿಯಲ್ಲಿ ಉಳಿದುಕೊಳ್ಳಬೇಕಾಯಿತು.
21. ನಾನು ಆ ವ್ಯಾಪಾರಸ್ತರಿಗೆ, “ನೀವು ಬಾಗಿಲಿಗೆದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು. [PE][PS]
22. ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. [PE][PS] ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು. [PE][PS]
23. ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು.
24. ಅವರಿಗೆ ಹುಟ್ಟಿದ ಮಕ್ಕಳಲ್ಲಿ ಅರ್ಧದಷ್ಟು ಮಂದಿಗೆ ಯೆಹೂದ್ಯರ ಭಾಷೆಯ ಜ್ಞಾನವೇ ಇರಲಿಲ್ಲ. ಅವರು ಅಷ್ಡೋದ್, ಅಮ್ಮೋನ್, ಮೋವಾಬ್, ದೇಶಗಳ ಭಾಷೆಗಳನ್ನಾಡುತ್ತಿದ್ದರು.
25. “ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.
26. ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು.
27. ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು. [PE][PS]
28. ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು. [PE][PS]
29. ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.
30. ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು.
31. ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. [PE][PS] ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ. [PE]

ಟಿಪ್ಪಣಿಗಳು

No Verse Added

ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 13
1 2 3 4 5 6 7 8 9 10 11 12 13
ನೆಹೆಮಿಯ 13:33
ನೆಹೆಮೀಯನ ಕಡೇ ಆಜ್ಞೆಗಳು 1 ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು. 2 ಯಾಕೆಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲಿ ನೀರನ್ನಾಗಲಿ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು. 3 ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು. 4 (4-5) ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು. 5 6 ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು. 7 ಎಲ್ಯಾಷೀಬನು ಟೋಬೀಯನಿಗೆ ನಮ್ಮ ದೇವರ ಆಲಯದ ಒಂದು ಕೋಣೆಯನ್ನು ಕೊಟ್ಟನೆಂಬ ದುಃಖದ ವಿಷಯವು ನನಗೆ ಜೆರುಸಲೇಮಿನಲ್ಲಿದ್ದಾಗ ತಿಳಿಯಿತು. 8 ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದೆನು. 9 ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು. 10 ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು. 11 ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು. 12 ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು. 13 ಯಾಜಕನಾದ ಶೆಲೆಮ್ಯನನ್ನೂ ಬೋಧಕನಾದ ಚಾದೋಕನನ್ನೂ ಪೆದಾಯ ಎಂಬ ಲೇವಿಯನನ್ನೂ ಉಗ್ರಾಣಗಳಿಗೆ ಮುಖ್ಯಸ್ತರನ್ನಾಗಿ ಮಾಡಿದೆನು. ಮತ್ತನ್ಯನ ಮೊಮ್ಮಗನೂ ಜಕ್ಕೂರನ ಮಗನೂ ಆಗಿರುವ ಹಾನಾನನನ್ನು ಅವರಿಗೆ ಸಹಾಯಕನನ್ನಾಗಿ ನೇಮಿಸಿದೆನು. ಇವರು ನಂಬಿಗಸ್ತರಾಗಿದ್ದರು. ತಮ್ಮ ಜನರಿಗೆ ಬೇಕಾದ ದವಸವನ್ನು, ಆಹಾರಸಾಮಾಗ್ರಿಗಳನ್ನು ಒದಗಿಸುವ ಕಾರ್ಯಕ್ಕೆ ಅವರು ಜವಾಬ್ದಾರರಾಗಿದ್ದರು. 14 ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು. 15 ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು. 16 ಜೆರುಸಲೇಮ್ ನಗರದಲ್ಲಿ ತೂರ್ ದೇಶದ ಕೆಲವರು ವಾಸಿಸುತ್ತಿದ್ದರು. ಅವರು ಸಬ್ಬತ್ ದಿನದಲ್ಲಿ ಮೀನು ಮತ್ತು ಇತರ ವಸ್ತುಗಳನ್ನು ನಗರದೊಳಕ್ಕೆ ತಂದು ಮಾರುತ್ತಿದ್ದರು. ಯೆಹೂದ್ಯರು ಅವರಿಂದ ಕೊಂಡುಕೊಳ್ಳುತ್ತಿದ್ದರು. 17 ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ. 18 ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು. 19 ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು. 20 ಒಂದೆರಡು ಬಾರಿ ವ್ಯಾಪಾರಸ್ತರು ನಗರದ ಹೊರಗಡೆಯೇ ರಾತ್ರಿಯಲ್ಲಿ ಉಳಿದುಕೊಳ್ಳಬೇಕಾಯಿತು. 21 ನಾನು ಆ ವ್ಯಾಪಾರಸ್ತರಿಗೆ, “ನೀವು ಬಾಗಿಲಿಗೆದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು. 22 ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು. 23 ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು. 24 ಅವರಿಗೆ ಹುಟ್ಟಿದ ಮಕ್ಕಳಲ್ಲಿ ಅರ್ಧದಷ್ಟು ಮಂದಿಗೆ ಯೆಹೂದ್ಯರ ಭಾಷೆಯ ಜ್ಞಾನವೇ ಇರಲಿಲ್ಲ. ಅವರು ಅಷ್ಡೋದ್, ಅಮ್ಮೋನ್, ಮೋವಾಬ್, ದೇಶಗಳ ಭಾಷೆಗಳನ್ನಾಡುತ್ತಿದ್ದರು. 25 “ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ. 26 ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು. 27 ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು. 28 ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು. 29 ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ. 30 ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು. 31 ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 13
1 2 3 4 5 6 7 8 9 10 11 12 13
Common Bible Languages
West Indian Languages
×

Alert

×

kannada Letters Keypad References