1. ಮೋಶೆಯು ಇಸ್ರೇಲರನ್ನು ಲೆಕ್ಕಿಸಿದ್ದು ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
|
3. ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು.
|
10. 0ಯೋಸೇಫನ ಸಂತಾನದಿಂದ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ; ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್;
|
16. ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.
|
18. ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
19. ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.
|
20. ಅವರು ಇಸ್ರೇಲನ ಚೊಚ್ಚಲ ಮಗನಾದ ರೂಬೇನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿ ಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
22. ಅವರು ಸಿಮೆಯೋನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
24. ಗಾದ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
26. ಯೆಹೂದನ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿಯೂ ಕುಟುಂಬಗಳಿಗನುಸಾರವಾಗಿಯೂ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
28. ಇಸ್ಸಾಕಾರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
30. ಜೆಬುಲೂನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
32. ಯೋಸೇಫನ ಮಗನಾದ ಎಫ್ರಾಯೀಮ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
34. ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
36. ಬೆನ್ಯಾಮೀನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
38. ದಾನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
40. ಆಶೇರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
42. ನಫ್ತಾಲಿ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
|
44. ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)
|
45. ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು.
|
50. ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.
|
51. ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.
|
53. ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”
|