ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಅರಣ್ಯಕಾಂಡ
1. {ಜನರು ಮತ್ತೆ ಗುಣುಗುಟ್ಟಿದರು} [PS] ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.
2. ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು.
3. ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು. [PS]
4. {ಎಪ್ಪತ್ತು ಮಂದಿ ಹಿರಿಯರು} [PS] ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?
5. ನಾವು ಈಜಿಪ್ಟಿನಲ್ಲಿ ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ.
6. ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಈ ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನಲು ಬೇರೇನೂ ಇಲ್ಲ” ಎಂದರು.
7. ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು.
8. ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.
9. ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು. [PE][PS]
10. ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು.
11. ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ?
12. ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?
13. ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
14. ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.
15. ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು. [PE][PS]
16. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.
17. ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು. [PE][PS]
18. “ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ.
19. ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ,
20. ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.” [PE][PS]
21. ಅದಕ್ಕೆ ಮೋಶೆ, “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳೆಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ.
22. ನಾವು ಎಲ್ಲಾ ಕುರಿಗಳನ್ನು, ದನಕರುಗಳನ್ನು ಕೊಂದರೂ ಇಷ್ಟು ಜನರು ಒಂದು ತಿಂಗಳು ತಿನ್ನುವುದಕ್ಕೆ ಸಾಕಾಗದು. ಸಮುದ್ರದಲ್ಲಿರುವ ಮೀನುಗಳೆಲ್ಲವನ್ನು ಹಿಡಿದರೂ ಅದು ಇಷ್ಟು ಜನರಿಗೆ ಸಾಕಾಗದು” ಎಂದು ಹೇಳಿದನು. [PE][PS]
23. ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು. [PE][PS]
24. ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು.
25. ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ [*ಆತ್ಮವನ್ನೇ ಅಕ್ಷರಶಃ, “ದೇವರು ಮೋಶೆಯಲ್ಲಿದ್ದ ಆತ್ಮವನ್ನು ತೆಗೆದುಕೊಂಡು ಅವರ ಮೇಲೆ ಸುರಿಸಿದನು.”] ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ. [PE][PS]
26. ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಗುಡಾರದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.
27. ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು. [PE][PS]
28. ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.) [PE][PS]
29. ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.
30. ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು. [PS]
31. {ಲಾವಕ್ಕಿಗಳು} [PS] ಆಗ ಯೆಹೋವನು ಸಮುದ್ರದ ಕಡೆಯಿಂದ ಬಲವಾದ ಗಾಳಿಯು ಬೀಸುವಂತೆ ಮಾಡಿದನು. ಗಾಳಿಯು ಲಾವಕ್ಕಿಗಳನ್ನು ಹೊತ್ತುಕೊಂಡು ಬಂತು. ಲಾವಕ್ಕಿಗಳು ಪಾಳೆಯದ ಸುತ್ತಲೂ ಹಾರಿಬಂದವು. ಒಬ್ಬನು ಪ್ರತಿಯೊಂದು ದಿಕ್ಕಿನಲ್ಲಿ ಒಂದು ದಿನ ನಡೆಯಬಹುದಾದಷ್ಟು ದೂರದವರೆಗೂ ಲಾವಕ್ಕಿಗಳು ಭೂಮಿಯಿಂದ ಮೂರು ಅಡಿ ಎತ್ತರದಲ್ಲಿ ಹಾರಾಡುತ್ತಿದ್ದವು.
32. ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು. [PE][PS]
33. ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.
34. ಈ ಕಾರಣದಿಂದ ಆ ಸ್ಥಳಕ್ಕೆ, “ಕಿಬ್ರೋತ್ ಹತಾವಾ” ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು. [PE][PS]
35. ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಚೇರೋತಿಗೆ ಹೋಗಿ ಅಲ್ಲಿ ಇಳಿದುಕೊಂಡರು. [PE]

ಟಿಪ್ಪಣಿಗಳು

No Verse Added

ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 36
ಅರಣ್ಯಕಾಂಡ 11:65
ಜನರು ಮತ್ತೆ ಗುಣುಗುಟ್ಟಿದರು 1 ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು. 2 ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು. 3 ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು. ಎಪ್ಪತ್ತು ಮಂದಿ ಹಿರಿಯರು 4 ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ? 5 ನಾವು ಈಜಿಪ್ಟಿನಲ್ಲಿ ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ. 6 ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಈ ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನಲು ಬೇರೇನೂ ಇಲ್ಲ” ಎಂದರು. 7 ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು. 8 ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು. 9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು. 10 ಎಲ್ಲಾ ಕುಟುಂಬದವರೂ ತಮ್ಮತಮ್ಮ ಗುಡಾರದ ಬಾಗಿಲುಗಳಲ್ಲಿ ನಿಂತು ಗುಣಗುಟ್ಟುತ್ತಿರುವ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹು ಕೋಪಗೊಂಡನು. ಇದರಿಂದಾಗಿ ಮೋಶೆಗೆ ಬಹಳ ಬೇಸರವಾಯಿತು. 11 ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ? 12 ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ? 13 ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು? 14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ. 15 ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು. 16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ. 17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು. 18 “ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ. 19 ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ, 20 ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.” 21 ಅದಕ್ಕೆ ಮೋಶೆ, “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳೆಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ. 22 ನಾವು ಎಲ್ಲಾ ಕುರಿಗಳನ್ನು, ದನಕರುಗಳನ್ನು ಕೊಂದರೂ ಇಷ್ಟು ಜನರು ಒಂದು ತಿಂಗಳು ತಿನ್ನುವುದಕ್ಕೆ ಸಾಕಾಗದು. ಸಮುದ್ರದಲ್ಲಿರುವ ಮೀನುಗಳೆಲ್ಲವನ್ನು ಹಿಡಿದರೂ ಅದು ಇಷ್ಟು ಜನರಿಗೆ ಸಾಕಾಗದು” ಎಂದು ಹೇಳಿದನು. 23 ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು. 24 ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು. 25 ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ *ಆತ್ಮವನ್ನೇ ಅಕ್ಷರಶಃ, “ದೇವರು ಮೋಶೆಯಲ್ಲಿದ್ದ ಆತ್ಮವನ್ನು ತೆಗೆದುಕೊಂಡು ಅವರ ಮೇಲೆ ಸುರಿಸಿದನು.” ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ. 26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಗುಡಾರದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು. 27 ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು. 28 ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.) 29 ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು. 30 ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು. ಲಾವಕ್ಕಿಗಳು 31 ಆಗ ಯೆಹೋವನು ಸಮುದ್ರದ ಕಡೆಯಿಂದ ಬಲವಾದ ಗಾಳಿಯು ಬೀಸುವಂತೆ ಮಾಡಿದನು. ಗಾಳಿಯು ಲಾವಕ್ಕಿಗಳನ್ನು ಹೊತ್ತುಕೊಂಡು ಬಂತು. ಲಾವಕ್ಕಿಗಳು ಪಾಳೆಯದ ಸುತ್ತಲೂ ಹಾರಿಬಂದವು. ಒಬ್ಬನು ಪ್ರತಿಯೊಂದು ದಿಕ್ಕಿನಲ್ಲಿ ಒಂದು ದಿನ ನಡೆಯಬಹುದಾದಷ್ಟು ದೂರದವರೆಗೂ ಲಾವಕ್ಕಿಗಳು ಭೂಮಿಯಿಂದ ಮೂರು ಅಡಿ ಎತ್ತರದಲ್ಲಿ ಹಾರಾಡುತ್ತಿದ್ದವು. 32 ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು. 33 ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು. 34 ಈ ಕಾರಣದಿಂದ ಆ ಸ್ಥಳಕ್ಕೆ, “ಕಿಬ್ರೋತ್ ಹತಾವಾ” ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು. 35 ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಚೇರೋತಿಗೆ ಹೋಗಿ ಅಲ್ಲಿ ಇಳಿದುಕೊಂಡರು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 36
Common Bible Languages
West Indian Languages
×

Alert

×

kannada Letters Keypad References