2. “ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.
|
16. ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)
|
17. ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ
|
18. ಆ ದೇಶದ ಸಂಗತಿಯನ್ನೆಲ್ಲಾ ತಿಳಿದುಕೊಳ್ಳಿರಿ. ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಮಂದಿಯೋ ಅಥವಾ ಸ್ವಲ್ಪ ಮಂದಿಯೋ,
|
20. ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)
|
21. ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.
|
22. ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.
|
23. ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತು ತಂದರು.
|
26. ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.
|
27. ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.
|
28. ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.
|
29. ಅಮಾಲೇಕ್ಯರು ನೆಗೆವ್ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.
|
30. ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗುಣುಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.
|
32. “ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ.
|
33. ಷಸರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.
|