2. “ನೀವು ಇಸ್ರೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸುಳ್ಳವರನ್ನು ಮತ್ತು ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾಗಿರುವ ಗಂಡಸರನ್ನು ಕುಟುಂಬ ಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
|
3. ಈ ಸಮಯದಲ್ಲಿ ಜನರು ಮೋವಾಬಿನ ಬಯಲುಗಳಲ್ಲಿ ತಂಗಿದ್ದರು. ಇದು ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ಸಮೀಪದಲ್ಲಿತ್ತು. ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಜನರೊಡನೆ ಮಾತಾಡಿ ಹೇಳಿದ್ದೇನೆಂದರೆ:
|
4. “ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.”
|
5. ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ ಚೊಚ್ಚಲ ಮಗನು.) ಹನೋಕನ ಕುಟುಂಬದವರಾದ ಹನೋಕ್ಯರು; ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು;
|
9. ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೆ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್.
|
10. ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.
|
12. ಸಿಮೆಯೋನ್ ಕುಲದ ಕುಟುಂಬಗಳು: ನೆಮೂವೇಲನ ಕುಟುಂಬದವರಾದ ನೆಮೂವೇಲ್ಯರು; ಯಾಮೀನನ ಕುಟುಂಬದವರಾದ ಯಾಮೀನ್ಯರು; ಯಾಕೀನನ ಕುಟುಂಬದವರಾದ ಯಾಕೀನ್ಯರು;
|
15. ಗಾದ್ ಕುಲದ ಕುಟುಂಬಗಳು: ಚೆಫೋನನ ಕುಟುಂಬದವರಾದ ಚೆಫೋನ್ಯರು; ಹಗ್ಗೀಯನ ಕುಟುಂಬದವರಾದ ಹಗ್ಗೀಯರು; ಶೂನೀಯ ಕುಟುಂಬದವರಾದ ಶೂನೀಯರು;
|
26. ಜೆಬುಲೂನ್ ಕುಲದ ಕುಟುಂಬಗಳು: ಸೆರೆದನ ಕುಟುಂಬದವರಾದ ಸೆರೆದ್ಯರು; ಏಲೋನನ ಕುಟುಂಬದವರಾದ ಏಲೋನ್ಯರು; ಯಹಲೇಲನ ಕುಟುಂಬದವರಾದ ಯಹಲೇಲ್ಯರು.
|
29. ಮನಸ್ಸೆ ಕುಲದ ಕುಟುಂಬಗಳು: ಮಾಕೀರನ ಕುಟುಂಬದವರಾದ ಮಾಕೀರ್ಯರು; ಮಾಕೀರನ ಮಗನಾದ ಗಿಲ್ಯಾದನ ಕುಟುಂಬದವರಾದ ಗಿಲ್ಯಾದ್ಯರು.
|
33. ಹೇಫೆರನ ಮಗನಾದ ಚಲ್ಫಹಾದನಿಗೆ ಹೆಣ್ಣುಮಕ್ಕಳು ಮಾತ್ರ ಹುಟ್ಟಿದರು. ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳ ಹೆಸರು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
|
35. ಎಫ್ರಾಯೀಮ್ ಕುಲದ ಕುಟುಂಬಗಳು: ಶೂತೆಲಹನ ಕುಟುಂಬದವರಾದ ಶೂತೆಲಹ್ಯರು; ಬೆಕೆರನ ಕುಟುಂಬದವರಾದ ಬೆಕೆರ್ಯರು; ತಹನನ ಕುಟುಂಬದವರಾದ ತಹನಿಯರು;
|
38. ಬೆನ್ಯಾಮೀನ್ ಕುಲದ ಕುಟುಂಬಗಳು: ಬೆಲಗನ ಕುಟುಂಬದವರಾದ ಬೆಲಗ್ಯರು; ಅಷ್ಬೇಲನ ಕುಟುಂಬದವರಾದ ಅಷ್ಬೇಲ್ಯರು; ಅಹೀರಾಮನ ಕುಟುಂಬದವರಾದ ಅಹೀರಾಮ್ಯರು;
|
40. ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಬೆಲಗನ ಕುಟುಂಬಗಳು: ಅರ್ದನ ಕುಟುಂಬದವರಾದ ಅರ್ದ್ಯರು; ನಾಮಾನನ ಕುಟುಂಬದವರಾದ ನಾಮಾನ್ಯರು.
|
44. ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ಕುಟುಂಬದವರಾದ ಇಮ್ನಾಹ್ಯರು; ಇಷ್ವೀಯ ಕುಟುಂಬದವರಾದ ಇಷ್ವೀಯರು; ಬೆರೀಯನ ಕುಟುಂಬದವರಾದ ಬೆರೀಯರು;
|
54. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
|
57. ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ, ಅವರಲ್ಲಿನ ಕುಟುಂಬಗಳು: ಗೇರ್ಷೋನನ ಕುಟುಂಬದವರಾದ ಗೇರ್ಷೋನ್ಯರು; ಕೆಹಾತನ ಕುಟುಂಬದವರಾದ ಕೆಹಾತ್ಯರು; ಮೆರಾರೀಯ ಕುಟುಂಬದವರಾದ ಮೆರಾರೀಯರು.
|
58. ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ.
|
59. ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರು ಯಾರೆಂದರೆ ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ ಇದ್ದಳು. ಅವಳ ಹೆಸರು ಮಿರ್ಯಾಮಳು.
|
61. ಆದರೆ ನಾದಾಬ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.
|
62. ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಈ ಜನರು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲರಿಗೆ ಕೊಟ್ಟ ಸ್ವಾಸ್ತ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.
|
63. ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಈ ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜೆರಿಕೊ ಪಟ್ಟಣದ ಆಚೆಯಲ್ಲಿ ಮೋವಾಬ್ಯರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು.
|
64. ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರೇಲರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
|
65. ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
|