1. “ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.
|
2. ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರುಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
|
6. ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.
|
7. “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.
|
8. ನೀವು ಯೆಹೋವನಿಗೆ ಸುಗಂಧಕರವಾಗಿರುವ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವು ಪೂರ್ಣಾಂಗವಾದವುಗಳಾಗಿರಬೇಕು.
|
9. ಇವುಗಳೊಡನೆ, ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಒಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು
|
11. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ.
|
12. “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.
|
13. ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು.
|
14. ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಅರ್ಪಿಸಬೇಕು. ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು
|
16. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
|
17. “ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
|
18. ಅಲ್ಲದೆ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
|
19. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
|
20. “ಈ ಉತ್ಸವದ ಮೂರನೆಯ ದಿನದಲ್ಲಿ ನೀವು ಹನ್ನೊಂದು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳು ಪೂರ್ಣಾಂಗವಾದವುಗಳಾಗಿರಬೇಕು.
|
21. ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕವಾಗಿರುವ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
|
22. ದೋಷಪರಿಹಾರಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮಾನುಸಾರವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.
|
23. ಈ ಉತ್ಸವದ ನಾಲ್ಕನೆಯ ದಿನದಲ್ಲಿ ನೀವು ಹತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವು ಪೂರ್ಣಾಂಗವುಳ್ಳವುಗಳಾಗಿರಬೇಕು.
|
24. ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
|
25. ಪಾಪಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
|
26. “ಈ ಉತ್ಸವದ ಐದನೆಯ ದಿನದಲ್ಲಿ ನೀವು ಒಂಭತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
|
27. ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
|
28. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸಬೇಕಾದ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
|
29. “ಈ ಉತ್ಸವದ ಆರನೆಯ ದಿನದಲ್ಲಿ ನೀವು ಎಂಟು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವುಳ್ಳವುಗಳಾಗಿರಬೇಕು.
|
30. ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನೂ ಪಾನದ್ರವ್ಯಾರ್ಪಣೆಯನ್ನೂ ಸರಿಯಾದ ಪ್ರಮಾಣದಲ್ಲಿ ಮಾಡಬೇಕು.
|
31. ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
|
32. “ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
|
33. ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
|
34. ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
|
36. ನೀವು ಈ ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
|
37. ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
|
38. ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
|
39. “ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನ ಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.”
|