3. ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.
|
5. ಆದುದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು.
|
6. ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.
|
7. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು.
|
8. ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.
|
9. ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು, ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು.
|
12. ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು.
|
14. ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.
|
16. ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.
|
17. ಆದುದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.
|
19. ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.
|
20. ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧ ಮಾಡಬೇಕು.”
|
21. ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:
|
24. ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”
|
26. “ನೀನೂ ಯಾಜಕನಾದ ಎಲ್ಲಾಜಾರನೂ ಸಮುದಾಯದ ಎಲ್ಲಾ ಕುಲಪ್ರಧಾನರೂ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು.
|
27. ಅವುಗಳನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಸೈನಿಕರಿಗೆ ಅರ್ಧವನ್ನು ಮಿಕ್ಕ ಸಮೂಹದವರಿಗೆ ಅರ್ಧವನ್ನು ಹಂಚಿಕೊಡಬೇಕು.
|
29. ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
|
30. ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
|
36. ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು.
|
38. ಸೈನಿಕರು ಮೂವತ್ತಾರು ಸಾವಿರ ದನಕರುಗಳನ್ನು ಪಡೆದುಕೊಂಡರು. ಅವುಗಳಲ್ಲಿ ಎಪ್ಪತ್ತೆರಡು ದನಕರುಗಳನ್ನು ಯೆಹೋವನಿಗೆ ಕೊಟ್ಟರು.
|
39. ಸೈನಿಕರು ಮೂವತ್ತು ಸಾವಿರದ ಐನೂರು ಕತ್ತೆಗಳನ್ನು ಪಡೆದುಕೊಂಡರು. ಅವರು ಅರವತ್ತೊಂದು ಕತ್ತೆಗಳನ್ನು ಯೆಹೋವನಿಗೆ ಕೊಟ್ಟರು.
|
40. ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು.
|
47. ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.
|
49. “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಸೈನಿಕರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ತಿಳಿಯಿತು.
|
50. ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.
|
51. ಅವರು ಕೊಟ್ಟ ಎಲ್ಲಾ ಚಿನ್ನದ ಒಡವೆಗಳನ್ನು ಮೋಶೆಯು ಮತ್ತು ಯಾಜಕನಾದ ಎಲ್ಲಾಜಾರನು ತೆಗೆದುಕೊಂಡರು. ಅವುಗಳನ್ನು ಕುಶಲತೆಯಿಂದ ತಯಾರಿಸಿದ ಒಡವೆಗಳಾಗಿದ್ದವು.
|
54. ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.
|