3. ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು.
|
4. ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.
|
6. ಸುಕ್ಕೋತಿನಿಂದ ಅವರು ಏತಾಮಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಜನರು ಅಲ್ಲಿ ಮರುಭೂಮಿಯ ಗಡಿಯಲ್ಲಿ ಪಾಳೆಯಮಾಡಿಕೊಂಡರು.
|
7. ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು.
|
8. ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.
|
9. ಜನರು ಮಾರವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು.
|
38. ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು.
|
48. ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬಿನ ಬಯಲಿನಲ್ಲಿ ಇಳಿದುಕೊಂಡರು.
|
49. ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.
|
52. ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳು ಮಾಡಬೇಕು.
|
53. ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
|
54. ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
|
55. “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.
|