ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅರಣ್ಯಕಾಂಡ
1. ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
2. “ಇಸ್ರೇಲರು ನೇಮಕವಾದ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು.
3. ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”
4. ಆದುದರಿಂದ ಮೋಶೆ ಇಸ್ರೇಲರಿಗೆ, ಪಸ್ಕಹಬ್ಬವನ್ನು ಆಚರಿಸಬೇಕೆಂದು ಹೇಳಿದನು.
5. ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.
6. ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದುದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,
7. “ನಾವು ಮನುಷ್ಯ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು.
8. ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.
9. [This verse may not be a part of this translation]
10. “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: “ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.
11. ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.
12. ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಆ ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
13. ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.
14. “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”
15. ಇಸ್ರೇಲರು ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು ಮತ್ತು ಅದು ರಾತ್ರಿಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.
16. ಹೀಗೆ ಮೇಘವು ಯಾವಾಗಲೂ ದೇವದರ್ಶನಗುಡಾರವನ್ನು ಮುಚ್ಚಿಕೊಂಡಿರುವುದು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವುದು.
17. ಆ ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಆ ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು.
18. ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಆ ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು.
19. ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.
20. ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಪವಿತ್ರ ಗುಡಾರದ ಮೇಲೆ ನಿಂತಿರುವುದು. ಯೆಹೋವನ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಿದ್ದರು ಮತ್ತು ಯೆಹೋವನ ಆಜ್ಞೆಯ ಪ್ರಕಾರ ಹೊರಡುತ್ತಿದ್ದರು.
21. ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೂ ಇರುತ್ತಿತ್ತು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಮೋಡವು ಚಲಿಸಿದಾಗ ಅದು ಹಗಲಾಗಿರಲಿ ರಾತ್ರಿಯಾಗಿರಲಿ ಜನರು ಅದನ್ನು ಹಿಂಬಾಲಿಸುವರು.
22. ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು.
23. ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.

Notes

No Verse Added

Total 36 Chapters, Current Chapter 9 of Total Chapters 36
ಅರಣ್ಯಕಾಂಡ 9:49
1. ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
2. “ಇಸ್ರೇಲರು ನೇಮಕವಾದ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು.
3. ಅವರು ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”
4. ಆದುದರಿಂದ ಮೋಶೆ ಇಸ್ರೇಲರಿಗೆ, ಪಸ್ಕಹಬ್ಬವನ್ನು ಆಚರಿಸಬೇಕೆಂದು ಹೇಳಿದನು.
5. ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.
6. ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದುದರಿಂದ ಅವರು ದಿನ ಮೋಶೆ ಆರೋನರ ಬಳಿಗೆ ಬಂದು,
7. “ನಾವು ಮನುಷ್ಯ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು.
8. ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.
9. This verse may not be a part of this translation
10. “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: “ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.
11. ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.
12. ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
13. ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.
14. “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”
15. ಇಸ್ರೇಲರು ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು ಮತ್ತು ಅದು ರಾತ್ರಿಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.
16. ಹೀಗೆ ಮೇಘವು ಯಾವಾಗಲೂ ದೇವದರ್ಶನಗುಡಾರವನ್ನು ಮುಚ್ಚಿಕೊಂಡಿರುವುದು. ರಾತ್ರಿವೇಳೆಯಲ್ಲಿ ಮೇಘವು ಬೆಂಕಿಯಂತೆ ಕಾಣಿಸುವುದು.
17. ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು.
18. ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು.
19. ಕೆಲವು ಬಾರಿ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.
20. ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಪವಿತ್ರ ಗುಡಾರದ ಮೇಲೆ ನಿಂತಿರುವುದು. ಯೆಹೋವನ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಿದ್ದರು ಮತ್ತು ಯೆಹೋವನ ಆಜ್ಞೆಯ ಪ್ರಕಾರ ಹೊರಡುತ್ತಿದ್ದರು.
21. ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೂ ಇರುತ್ತಿತ್ತು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಮೋಡವು ಚಲಿಸಿದಾಗ ಅದು ಹಗಲಾಗಿರಲಿ ರಾತ್ರಿಯಾಗಿರಲಿ ಜನರು ಅದನ್ನು ಹಿಂಬಾಲಿಸುವರು.
22. ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು.
23. ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.
Total 36 Chapters, Current Chapter 9 of Total Chapters 36
×

Alert

×

kannada Letters Keypad References