2. ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ.
|
3. ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ.
|
5. ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ.
|
7. ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು. ಸೊಲೊಮೋನನು ತನ್ನ ಮಗನಿಗೆ ಮಾಡಿದ ಉಪದೇಶ
|
9. ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.
|
11. ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆ ಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ
|
18. ಅವರಾದರೊ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.
|
21. ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:
|
22. “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?
|
23. ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.
|
24. “ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ.
|
25. ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.
|
27. ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.
|
28. “ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.
|
29. ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ.
|
30. ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.
|
31. ಆದ್ದರಿಂದ ನೀವು ನಿಮ್ಮ ದುಷ್ಟನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.
|