4. ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.
|
5. ನೀತಿವಂತನು ಯಥಾರ್ಥವಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು.
|
9. ಕೆಡುಕನು ತನ್ನ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾನೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.
|
11. ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.
|
14. ಜ್ಞಾನದ ಮಾರ್ಗದರ್ಶನವಿಲ್ಲದೆ ದೇಶವು ಬಿದ್ದು ಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.
|
18. ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.
|
19. ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.
|
28. ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಸದ್ದರ್ಮಿಯು ಚಿಗುರಿದ ಎಲೆಯಂತೆ ಬೆಳೆಯುವನು.
|
29. ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.
|
31. ಶಿಷ್ಟರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆಯನ್ನು ಹೊಂದುವುದು ನಿಶ್ಚಯ.
|