5. ಬೇರೊಬ್ಬನ ಆಲೋಚನೆಗಳನ್ನು ನೋಡಲು ಸಾಧ್ಯವಿಲ್ಲ; ಅವು ಆಳವಾದ ನೀರಿನಂತಿವೆ; ಆದರೆ ಅವುಗಳನ್ನು ವಿವೇಕಿಯು ಅರ್ಥಮಾಡಿಕೊಳ್ಳಬಲ್ಲನು.
|
6. ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.
|
13. ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.
|
14. ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು.
|
18. ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.
|
22. “ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು.
|
25. ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.
|
28. ರಾಜನು ನಂಬಿಗಸ್ತನಾಗಿಯೂ ಪ್ರೀತಿಯುಳ್ಳವನಾಗಿಯೂ ಇದ್ದರೆ, ಅವನ ಅಧಿಕಾರ ಉಳಿದುಕೊಳ್ಳುವುದು; ಅವನ ಆಡಳಿತ ಮುಂದುವರಿಯುವುದು.
|