4. ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.
|
11. ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ. — 11 — PS
|
21. ಕುಡುಕರೂ ಹೊಟ್ಟೆಬಾಕರೂ ಬಡವರಾಗುವರು. ತಿಂದು ಕುಡಿದು ನಿದ್ರಿಸುವುದೇ ಅವರ ಕಾರ್ಯಗಳು. ಅವರು ಬಹು ಬೇಗನೆ ಬಡವರಾಗುವರು. — 16 — PS
|
22. ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರುವಾಗಲೂ ಆಕೆಯನ್ನು ಗೌರವಿಸು.
|
23. ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.
|
29. ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?
|
31. ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ.
|
34. ನೀನು ಮಲಗಿಕೊಂಡಾಗ ಸಮುದ್ರದ ಅಲ್ಲೋಲಕಲ್ಲೋಲ ಅಲೆಗಳ ಮೇಲಿರುವಂತೆಯೂ ಹಡಗಿನ ಮೇಲೆ ಮಲಗಿಕೊಂಡಿರುವಂತೆಯೂ ನಿನಗನ್ನಿಸುವುದು.
|
35. “ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ. PE
|