6. ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ. — 22 — PS
|
12. “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. — 26 — PS
|
14. ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ. — 27 — PS
|
16. ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು. — 28 — PS
|
22. ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು. PS
|
23. {ಮತ್ತಷ್ಟು ಜ್ಞಾನೋಕ್ತಿಗಳು} PS ಇವು ಸಹ ಜ್ಞಾನಿಗಳ ಮಾತುಗಳು: PEPS ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.
|
24. ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.
|
25. ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು. PEPS
|
27. ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ. PEPS
|
29. “ಅವನು ನನಗೆ ಕೇಡುಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡುಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ. PEPS
|
31. ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.
|
33. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ?
|
34. ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ. PE
|