1. ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.
2. ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು. — 20 — [PS]
3. ಒಳ್ಳೆಯ ಮನೆಯು ಜ್ಞಾನದ ಮೇಲೂ ವಿವೇಕದ ಮೇಲೂ ಕಟ್ಟಲ್ಪಟ್ಟಿರುವುದು.
4. ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ. — 21 — [PS]
5. ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ.
6. ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ. — 22 — [PS]
7. ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ. — 23 — [PS]
8. ಕೇಡುಮಾಡುವವನನ್ನು ಜನರು “ಕೆಡುಕ” ಎಂದು ಕರೆಯುವರು.
9. ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ. — 24 — [PS]
10. ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ. — 25 — [PS]
11. ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು.
12. “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. — 26 — [PS]
13. ನನ್ನ ಮಗನೇ, ಜೇನುತುಪ್ಪವನ್ನು ತಿನ್ನು, ಅದು ಒಳ್ಳೆಯದು. ಜೇನುಗೂಡಿನ ಜೇನುತುಪ್ಪ ಸಿಹಿ.
14. ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ. — 27 — [PS]
15. ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.
16. ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು. — 28 — [PS]
17. ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ.
18. ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದೆ ಹೋಗಬಹುದು. — 29 — [PS]
19. ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚುಪಡಬೇಡ.
20. ಆ ಕೆಡುಕರಿಗೆ ನಿರೀಕ್ಷೆಯಿಲ್ಲ. ಅವರ ಬೆಳಕು ಕತ್ತಲೆಯಾಗುವುದು. — 30 — [PS]
21. ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.
22. ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು. [PS]
23. {ಮತ್ತಷ್ಟು ಜ್ಞಾನೋಕ್ತಿಗಳು} [PS] ಇವು ಸಹ ಜ್ಞಾನಿಗಳ ಮಾತುಗಳು: [PE][PS] ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.
24. ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.
25. ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು. [PE][PS]
26. ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ. [PE][PS]
27. ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ. [PE][PS]
28. ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ. [PE][PS]
29. “ಅವನು ನನಗೆ ಕೇಡುಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡುಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ. [PE][PS]
30. ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿತೋಟದ ಬಳಿಯಲ್ಲೂ ನಡೆದುಹೋದೆನು.
31. ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.
32. ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;
33. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ?
34. ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ. [PE]