ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಙ್ಞಾನೋಕ್ತಿಗಳು
1. {ಸೊಲೊಮೋನನಿಂದ ಮತ್ತಷ್ಟು ಜ್ಞಾನೋಕ್ತಿಗಳು} [PS] ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು: [PE][PS]
2. ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ. [PE][PS]
3. ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು. [PE][PS]
4. ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು.
5. ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ. [PE][PS]
6. ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.
7. ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ. [PE][PS]
8. ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು. [PE][PS]
9. ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.
10. ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು. [PE][PS]
11. ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.
12. ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ. [PE][PS]
13. ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು. [PE][PS]
14. ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು. [PE][PS]
15. ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ. [PE][PS]
16. ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ.
17. ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು. [PE][PS]
18. ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.
19. ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ. [PE][PS]
20. ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು. [PE][PS]
21. ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು.
22. ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು. [PE][PS]
23. ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ. [PE][PS]
24. ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು. [PE][PS]
25. ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು. [PE][PS]
26. ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ. [PE][PS]
27. ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ. [PE][PS]
28. ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು. [PE]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 31
ಸೊಲೊಮೋನನಿಂದ ಮತ್ತಷ್ಟು ಜ್ಞಾನೋಕ್ತಿಗಳು 1 ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು: 2 ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ. 3 ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು. 4 ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು. 5 ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ. 6 ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ. 7 ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ. 8 ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು. 9 ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ. 10 ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು. 11 ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು. 12 ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ. 13 ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು. 14 ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು. 15 ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ. 16 ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ. 17 ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು. 18 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ. 19 ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ. 20 ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು. 21 ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು. 22 ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು. 23 ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ. 24 ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು. 25 ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು. 26 ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ. 27 ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ. 28 ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 31
×

Alert

×

Kannada Letters Keypad References