1. {ಸೊಲೊಮೋನನಿಂದ ಮತ್ತಷ್ಟು ಜ್ಞಾನೋಕ್ತಿಗಳು} PS ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು: PEPS
|
3. ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು. PEPS
|
4. ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು.
|
5. ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ. PEPS
|
8. ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು. PEPS
|
10. ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು. PEPS
|
12. ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ. PEPS
|
13. ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು. PEPS
|
18. ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.
|
19. ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ. PEPS
|
20. ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು. PEPS
|
26. ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ. PEPS
|
27. ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ. PEPS
|