9. ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು. PEPS
|
10. ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ. PEPS
|
11. ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ. PEPS
|
12. ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟು ಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು. PEPS
|
14. ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು. PEPS
|
16. ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನ ಗಾಳಿಯನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಯಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ. PEPS
|
18. ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು. PEPS
|
21. ಚಿನ್ನವಾಗಲಿ ಬೆಳ್ಳಿಯಾಗಲಿ ಬೆಂಕಿಯಿಂದ ಶುದ್ಧೀಕರಿಸಲ್ಪಡುವಂತೆಯೇ ಮನುಷ್ಯನು ಜನರಿಂದ ಬರುವ ಹೊಗಳಿಕೆಯಿಂದ ಪರೀಕ್ಷಿತನಾಗುವನು. PEPS
|
23. ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ.
|
25. ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.
|
26. ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು.
|
27. ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು. PE
|