ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಙ್ಞಾನೋಕ್ತಿಗಳು
1. {ಮಸ್ಸಾದ ಲೆಮೂವೇಲನ ಜ್ಞಾನೋಕ್ತಿಗಳಿವು} [PS] ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದ್ದಳು. [PE][PS]
2. ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ.
3. ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶಮಾಡುವವರು ಹೆಂಗಸರುಗಳೇ. ನಿನ್ನನ್ನು ಅವರಲ್ಲಿ ಹಾಳುಮಾಡಿಕೊಳ್ಳಬೇಡ.
4. ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ.
5. ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು.
6. ಸಾಯುವವರಿಗೆ ಮದ್ಯವನ್ನು ಕೊಡು. ವ್ಯಥೆಯಲ್ಲಿರುವವರಿಗೆ ಮದ್ಯವನ್ನು ಕೊಡು.
7. ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತುಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತುಬಿಡುವರು. [PE][PS]
8. ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು.
9. ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.
10. {ಯೋಗ್ಯಳಾದ ಹೆಂಡತಿ} [PS] ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. [QBR2] ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು. [QBR]
11. ಗಂಡನ ನಂಬಿಕೆಗೆ ಆಕೆ ಪಾತ್ರಳು. [QBR2] ಗಂಡ ಬಡವನಾಗುವುದೇ ಇಲ್ಲ. [QBR]
12. ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. [QBR2] ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ. [QBR]
13. ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು [QBR2] ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು. [QBR]
14. ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು [QBR2] ದೂರದಿಂದ ಮನೆಗೆ ತರುವಳು. [QBR]
15. ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. [QBR2] ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು. [QBR]
16. ಆಕೆ ಜಮೀನನ್ನು ಕೊಂಡುಕೊಳ್ಳುವಳು; [QBR2] ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು. [QBR]
17. ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. [QBR2] ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ. [QBR]
18. ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. [QBR2] ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು. [QBR]
19. ಆಕೆ ತಾನೇ ದಾರವನ್ನು ತಯಾರಿಸುವಳು; [QBR2] ಬಟ್ಟೆಯನ್ನು ನೇಯುವಳು. [QBR]
20. ಆಕೆ ಯಾವಾಗಲೂ ಬಡವರಿಗೆ ಕೊಡುವಳು; [QBR2] ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು. [QBR]
21. ಹಿಮ ಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; [PE][PS] ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ. [QBR]
22. ಆಕೆ ಹೊದಿಕೆಗಳನ್ನು ತಯಾರಿಸುವಳು. [QBR2] ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು. [QBR]
23. ಜನರು ಆಕೆಯ ಗಂಡನನ್ನು ಗೌರವಿಸುವರು. [QBR2] ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು. [QBR]
24. ಆಕೆ ಒಳ್ಳೆಯ ವ್ಯಾಪಾರ ಮಾಡುವಳು; [QBR2] ಉಡುಪುಗಳನ್ನೂ ನಡುಪಟ್ಟಿಗಳನ್ನೂ ತಯಾರಿಸಿ ಮಾರುವಳು. [QBR]
25. ಆಕೆಯು ಶಕ್ತಿಯನ್ನೂ ಗಾಂಭೀರ್ಯವನ್ನೂ ಪ್ರದರ್ಶಿಸುವಳು; [QBR2] ಹರ್ಷದಿಂದ ಭವಿಷ್ಯತ್ತನ್ನು ಎದುರುನೋಡುವಳು. [QBR]
26. ಆಕೆಯು ಜ್ಞಾನದಿಂದ ಮಾತಾಡುವಳು; [QBR2] ಪ್ರೀತಿಯಿಂದ ಸದುಪದೇಶ ಮಾಡುವಳು. [QBR]
27. ಆಕೆಯು ಚಟುವಟಿಕೆಯಿಂದಿದ್ದು [QBR2] ಗೃಹಕಾರ್ಯಗಳನ್ನೆಲ್ಲಾ ನೋಡಿಕೊಳ್ಳುವಳು. [QBR]
28. ಮಕ್ಕಳು ಎದ್ದುನಿಂತು ಆಕೆಯನ್ನು ಅಭಿನಂದಿಸುವರು. [QBR2] ಗಂಡನು ಅವಳನ್ನು ಹೊಗಳುವನು. [QBR]
29. “ಅನೇಕ ಹೆಂಗಸರು ಮೆಚ್ಚಿಕೆಗೆ ಪಾತ್ರವಾದ ಕಾರ್ಯಗಳನ್ನು ಮಾಡಿದ್ದಾರೆ. [QBR2] ಆದರೆ ನೀನು ಅವರೆಲ್ಲರಿಗಿಂತಲೂ ಅತ್ಯುತ್ತಮಳು” ಎಂದು ಆಕೆಯ ಗಂಡನು ಹೊಗಳುವನು. [QBR]
30. ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. [QBR2] ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು. [QBR]
31. ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. [QBR2] ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು. [PE]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 31 / 31
ಮಸ್ಸಾದ ಲೆಮೂವೇಲನ ಜ್ಞಾನೋಕ್ತಿಗಳಿವು 1 ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದ್ದಳು. 2 ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ. 3 ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶಮಾಡುವವರು ಹೆಂಗಸರುಗಳೇ. ನಿನ್ನನ್ನು ಅವರಲ್ಲಿ ಹಾಳುಮಾಡಿಕೊಳ್ಳಬೇಡ. 4 ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ. 5 ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು. 6 ಸಾಯುವವರಿಗೆ ಮದ್ಯವನ್ನು ಕೊಡು. ವ್ಯಥೆಯಲ್ಲಿರುವವರಿಗೆ ಮದ್ಯವನ್ನು ಕೊಡು. 7 ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತುಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತುಬಿಡುವರು. 8 ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು. 9 ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು. ಯೋಗ್ಯಳಾದ ಹೆಂಡತಿ 10 ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು.
11 ಗಂಡನ ನಂಬಿಕೆಗೆ ಆಕೆ ಪಾತ್ರಳು. ಗಂಡ ಬಡವನಾಗುವುದೇ ಇಲ್ಲ.
12 ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ.
13 ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು.
14 ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ದೂರದಿಂದ ಮನೆಗೆ ತರುವಳು.
15 ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.
16 ಆಕೆ ಜಮೀನನ್ನು ಕೊಂಡುಕೊಳ್ಳುವಳು; ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು.
17 ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ.
18 ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.
19 ಆಕೆ ತಾನೇ ದಾರವನ್ನು ತಯಾರಿಸುವಳು; ಬಟ್ಟೆಯನ್ನು ನೇಯುವಳು.
20 ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.
21 ಹಿಮ ಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ;
ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ.
22 ಆಕೆ ಹೊದಿಕೆಗಳನ್ನು ತಯಾರಿಸುವಳು. ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು.
23 ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು.
24 ಆಕೆ ಒಳ್ಳೆಯ ವ್ಯಾಪಾರ ಮಾಡುವಳು; ಉಡುಪುಗಳನ್ನೂ ನಡುಪಟ್ಟಿಗಳನ್ನೂ ತಯಾರಿಸಿ ಮಾರುವಳು.
25 ಆಕೆಯು ಶಕ್ತಿಯನ್ನೂ ಗಾಂಭೀರ್ಯವನ್ನೂ ಪ್ರದರ್ಶಿಸುವಳು; ಹರ್ಷದಿಂದ ಭವಿಷ್ಯತ್ತನ್ನು ಎದುರುನೋಡುವಳು.
26 ಆಕೆಯು ಜ್ಞಾನದಿಂದ ಮಾತಾಡುವಳು; ಪ್ರೀತಿಯಿಂದ ಸದುಪದೇಶ ಮಾಡುವಳು.
27 ಆಕೆಯು ಚಟುವಟಿಕೆಯಿಂದಿದ್ದು ಗೃಹಕಾರ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
28 ಮಕ್ಕಳು ಎದ್ದುನಿಂತು ಆಕೆಯನ್ನು ಅಭಿನಂದಿಸುವರು. ಗಂಡನು ಅವಳನ್ನು ಹೊಗಳುವನು.
29 “ಅನೇಕ ಹೆಂಗಸರು ಮೆಚ್ಚಿಕೆಗೆ ಪಾತ್ರವಾದ ಕಾರ್ಯಗಳನ್ನು ಮಾಡಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಅತ್ಯುತ್ತಮಳು” ಎಂದು ಆಕೆಯ ಗಂಡನು ಹೊಗಳುವನು.
30 ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.
31 ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 31 / 31
×

Alert

×

Kannada Letters Keypad References