ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.
2. ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.
3. ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
4. ದುಷ್ಟರಾದರೊ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.
5. ನೀತಿವಂತರು ನ್ಯಾಯನಿರ್ಣಯಿಸುವಾಗ ಪಾಪಿಗಳಿಗೂ ದುಷ್ಟರಿಗೂ ಅಪರಾಧಿಗಳೆಂದು ತೀರ್ಪಾಗುವುದು.
6. ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು.

Notes

No Verse Added

Total 150 Chapters, Current Chapter 1 of Total Chapters 150
ಕೀರ್ತನೆಗಳು 1:14
1. ಯಾವನು ದುಷ್ಟರ ಸಲಹೆಯನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.
2. ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.
3. ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
4. ದುಷ್ಟರಾದರೊ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.
5. ನೀತಿವಂತರು ನ್ಯಾಯನಿರ್ಣಯಿಸುವಾಗ ಪಾಪಿಗಳಿಗೂ ದುಷ್ಟರಿಗೂ ಅಪರಾಧಿಗಳೆಂದು ತೀರ್ಪಾಗುವುದು.
6. ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು.
Total 150 Chapters, Current Chapter 1 of Total Chapters 150
×

Alert

×

kannada Letters Keypad References