ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, [QBR2] ಪಾಪಿಗಳಂತೆ ಜೀವಿಸದೆ, [QBR] ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ [QBR2] ಅವನೇ ಭಾಗ್ಯವಂತನು. [QBR]
2. ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ [QBR2] ಅದನ್ನೇ ಹಗಲಿರುಳು ಧ್ಯಾನಿಸುವನು. [QBR]
3. ಅವನು ನೀರಿನ ಕಾಲುವೆಗಳ ಬಳಿಯಲ್ಲಿ [QBR2] ಹುಲುಸಾಗಿ ಬೆಳೆದಿರುವ ಮರದಂತಿರುವನು. [QBR] ಆ ಮರವು ತಕ್ಕಕಾಲದಲ್ಲಿ ಫಲಿಸುವುದು; [QBR2] ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; [QBR] ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
4. ದುಷ್ಟರಾದರೋ ಹಾಗಲ್ಲ! [QBR2] ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು. [QBR]
5. ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. [QBR2] ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ. [QBR]
6. ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; [QBR2] ದುಷ್ಟರನ್ನಾದರೊ ನಾಶಪಡಿಸುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
ಕೀರ್ತನೆಗಳು 1:172
1 ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು. 2 ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು. 3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು. 4 ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು. 5 ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ. 6 ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
Common Bible Languages
West Indian Languages
×

Alert

×

kannada Letters Keypad References