1. ಯೆಹೋವನೇ, ನೀನು ಬಹುದೂರವಾಗಿರುವುದೇಕೆ? [QBR2] ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ? [QBR]
2. ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, [QBR2] ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು. [QBR]
3. ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. [QBR2] ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು. [QBR]
4. ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; [QBR2] ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು. [QBR]
5. ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. [*ಅವರು … ತೆಗೆದುಕೊಳ್ಳುವುದಿಲ್ಲ ಅಕ್ಷರಶಃ, “ನಿನ್ನ ನ್ಯಾಯತೀರ್ಪು ಅವನಿಗಿಂತ ಬಹು ಉನ್ನತವಾಗಿದೆ.”] [QBR2] ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು. [QBR]
6. ಅವರು, “ನಮ್ಮನ್ನು ಯಾವುದೂ ಕದಲಿಸದು; [QBR2] ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ. [QBR]
7. ಅವರು ಯಾವಾಗಲೂ ಶಪಿಸುತ್ತಾರೆ; [QBR2] ಕೆಟ್ಟ ಮಾತುಗಳನ್ನು ಆಡುತ್ತಾರೆ, ಕುಯುಕ್ತಿಗಳನ್ನು ಮಾಡುತ್ತಾರೆ. [QBR]
8. ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು [QBR2] ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು. [QBR]
9. ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. [QBR2] ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು. [QBR]
10. ಆ ದುಷ್ಟರು ಕುಗ್ಗಿಹೋದವರನ್ನು [QBR2] ಮತ್ತೆಮತ್ತೆ ಜಜ್ಜಿಹಾಕುವರು. [QBR]
11. ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! [QBR2] ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! [QBR2] ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.
12. ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! [QBR2] ದೇವರೇ, ಆ ದುಷ್ಟರನ್ನು ದಂಡಿಸು! [QBR2] ನಿಸ್ಸಹಾಯಕರನ್ನು ಮರೆತುಬಿಡಬೇಡ!
13. ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? [QBR2] ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ? [QBR]
14. ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. [QBR2] ಅವುಗಳನ್ನು ನೋಡಿ ಕಾರ್ಯನಿರತನಾಗು. [QBR] ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. [QBR2] ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!
15. ಕೆಡುಕರನ್ನು ನಾಶಮಾಡು. [QBR2] ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು! [QBR]
16. ಯೆಹೋವನು ಸದಾಕಾಲವೂ ರಾಜನಾಗಿರುವನು. [QBR2] ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು. [QBR]
17. ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. [QBR2] ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ. [QBR]
18. ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. [QBR2] ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು. [PE]