2. ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ; ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿ ಬೀಳುವರು.
|
3. ಕೆಡುಕರು ತಮ್ಮ ಇಷ್ಟ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.
|
5. ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.
|
8. ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರು ನೋಡುವರು.
|
9. ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು.
|
11. ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.
|
13. ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ?
|
14. ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!
|