1. ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! [QBR2] ನನ್ನ ಸರ್ವಾಂಗಗಳೇ, ಆತನ ಪವಿತ್ರ ಹೆಸರನ್ನು ಕೊಂಡಾಡಿರಿ! [QBR]
2. ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! [QBR2] ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. [QBR]
3. ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; [QBR2] ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು. [QBR]
4. ಆತನು ನಮ್ಮಜೀವವನ್ನು ನಾಶನದಿಂದ ರಕ್ಷಿಸಿ [QBR2] ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು. [QBR]
5. ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. [QBR2] ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ. [QBR]
6. ಯೆಹೋವನು ನೀತಿವಂತನಾಗಿದ್ದಾನೆ. [QBR2] ಕುಗ್ಗಿಹೋದವರಿಗೆ ಆತನು ನ್ಯಾಯ ದೊರಕಿಸುವನು. [QBR]
7. ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; [QBR2] ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು. [QBR]
8. ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ [QBR2] ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ. [QBR]
9. ಆತನು ಯಾವಾಗಲೂ ಟೀಕಿಸುವವನಲ್ಲ. [QBR2] ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ. [QBR]
10. ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. [QBR2] ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ. [QBR]
11. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ [QBR2] ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ. [QBR]
12. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ [QBR2] ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ. [QBR]
13. ತಂದೆಯು ಮಕ್ಕಳನ್ನು ಕನಿಕರಿಸುವಂತೆ [QBR2] ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು. [QBR]
14. ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. [QBR2] ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ. [QBR]
15. ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. [QBR2] ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ. [QBR]
16. ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. [QBR2] ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. [QBR2] ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು. [QBR]
17. ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. [QBR2] ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. [QBR] ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು. [QBR2]
18. ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. [QBR2] ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. [QBR]
19. ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. [QBR2] ಆತನು ಸಮಸ್ತವನ್ನು ಆಳುವನು. [QBR]
20. ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, [QBR2] ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ. [QBR]
21. ಆತನ ಸೈನ್ಯಗಳೇ, [*ಆತನ ಸೈನ್ಯಗಳೇ ಈ ಪದ, “ಸೈನ್ಯಗಳು,” “ದೇವದೂತರು,” ಅಥವಾ “ನಕ್ಷತ್ರಗಳು ಮತ್ತು ಗ್ರಹಗಳು” ಎಂಬರ್ಥಗಳನ್ನು ಕೊಡುತ್ತದೆ.] ಚಿತ್ತವನ್ನು ನೇರವೇರಿಸುವ ಸೇವಕರೇ, [QBR2] ಯೆಹೋವನನ್ನು ಕೊಂಡಾಡಿರಿ. [QBR]
22. ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. [QBR2] ಅವುಗಳೆಲ್ಲಾ ಆತನನ್ನು ಕೊಂಡಾಡಲಿ! [QBR] ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! [PE]