1. ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.
|
3. ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.
|
12. ಕಾಡುಪಕ್ಷಿಗಳು ಬಂದು ನೀರಿನ ಹಳ್ಳಗಳ ಬಳಿಯಲ್ಲಿ ವಾಸಿಸುತ್ತವೆ. ಸಮೀಪದ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
|
14. ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.
|
15. ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.
|
16. ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು.
|
19. ವಿಶೇಷಕಾಲಗಳ ಸೂಚನೆಗಾಗಿ ನೀನು ನಮಗೆ ಚಂದ್ರನನ್ನು ಕೊಟ್ಟಿರುವೆ. ಸೂರ್ಯನಿಗೆ ತಾನು ಮುಳುಗತಕ್ಕ ಸಮಯವು ಯಾವಾಗಲೂ ತಿಳಿದಿದೆ.
|
24. ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.
|
25. ಇಗೋ ವಿಶಾಲವಾದ ಸಮುದ್ರವನ್ನು ನೋಡು. ಅದರೊಳಗೆ ಅನೇಕ ಬಗೆಯ ದೊಡ್ಡಜೀವಿಗಳೂ ನಾನಾ ಬಗೆಯ ಚಿಕ್ಕಜೀವಿಗಳೂ ಅಸಂಖ್ಯಾತವಾಗಿವೆ.
|
28. ಸರ್ವಜೀವಿಗಳಿಗೆ ಆಹಾರವನ್ನು ಕೊಡುವಾತನು ನೀನೇ. ನೀನು ಕೈತೆರೆದು ಒಳ್ಳೆಯ ಆಹಾರವನ್ನು ಕೊಡಲು ಅವು ತಿಂದು ತೃಪ್ತಿಯಾಗುತ್ತವೆ.
|
29. ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.
|
32. ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ.
|
35. ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ. ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು!
|