1. ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! [QBR2] ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! [QBR] ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ. [QBR2]
2. ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ [QBR] ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ. [QBR2]
3. ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. [QBR] ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು [QBR2] ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ. [QBR]
4. ಗಾಳಿಯನ್ನು ನಿನ್ನ ದೂತರನ್ನಾಗಿಯೂ [QBR2] ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ. [*ಗಾಳಿಯನ್ನು … ಮಾಡಿರುವೆ ಬಹಶಃ, ಕೆರೂಬಿ ಮತ್ತು ಸೆರಾಫಿ ಎಂಬ ಎರಡು ಬಗೆಯ ದೂತರುಗಳ ಬಗ್ಗೆ ಇದು ತಿಳಿಸುತ್ತಿರಬಹುದು. ಸೆರಾಫ್ ಎಂಬ ಹೀಬ್ರೂ ಭಾಷೆಯ ಪದದ ಅರ್ಥ “ಬೆಂಕಿ.”] [QBR]
5. ಭೂಮಿಯನ್ನು ನೀನು ಅಸ್ತಿವಾರದ ಮೇಲೆ ಕಟ್ಟಿರುವುದರಿಂದ [QBR2] ಅದೆಂದಿಗೂ ನಾಶವಾಗದು. [QBR]
6. ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. [QBR2] ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು. [QBR]
7. ನೀನು ಆಜ್ಞಾಪಿಸಲು ನೀರು ಹಿಂತಿರುಗಿತು. [QBR2] ನೀನು ಬರ್ಜಿಸಲು ನೀರು ಓಡಿಹೋಯಿತು. [QBR]
8. ಜಲರಾಶಿಗಳು ಬೆಟ್ಟಗಳಿಂದ ಇಳಿದು [QBR2] ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದುಹೋದವು. [QBR]
9. ನೀನು ಸಮುದ್ರಗಳಿಗೆ ಮೇರೆಗಳನ್ನು ಗೊತ್ತುಪಡಿಸಿರುವುದರಿಂದ [QBR2] ನೀರಿನಿಂದ ಭೂಮಿಯು ಮತ್ತೆಂದಿಗೂ ಆವೃತವಾಗದು.
10. ನೀನು ನೀರನ್ನು ಬುಗ್ಗೆಗಳಿಂದ ತೊರೆಗಳಿಗೆ ಹರಿಯಮಾಡುವೆ. [QBR2] ಬೆಟ್ಟದ ತೊರೆಗಳ ಮೂಲಕ ನೀರು ಹರಿದುಹೋಗುವುದು. [QBR]
11. ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. [QBR2] ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ. [QBR]
12. ಕಾಡುಪಕ್ಷಿಗಳು ಬಂದು ನೀರಿನ ಹಳ್ಳಗಳ ಬಳಿಯಲ್ಲಿ ವಾಸಿಸುತ್ತವೆ. [QBR2] ಸಮೀಪದ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. [QBR]
13. ಆತನು ಬೆಟ್ಟಗಳ ಮೇಲೆ ಮಳೆಯನ್ನು ಸುರಿಸುವನು. [QBR2] ಆತನ ಸೃಷ್ಟಿಗಳು ಭೂಮಿಗೆ ಅಗತ್ಯವಾದ ಪ್ರತಿಯೊಂದನ್ನೂ ಒದಗಿಸುತ್ತವೆ. [QBR]
14. ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. [QBR] ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. [QBR] ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ. [QBR]
15. ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ [QBR2] ನಮ್ಮ ಚರ್ಮವನ್ನು ಮೃದುಗೊಳಿಸುವ [†ನಮ್ಮನ್ನು … ಮೃದುಗೊಳಿಸುವ ಅಕ್ಷರಶಃ, “ನಮ್ಮ ಮುಖಕ್ಕೆ ಕಾಂತಿಯನ್ನುಂಟುಮಾಡುವನು.”] ಎಣ್ಣೆಯನ್ನೂ [QBR2] ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.
16. ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, [QBR2] ಅವುಗಳನ್ನು ನೆಟ್ಟಾತನು ಯೆಹೋವನೇ. [QBR2] ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು. [QBR]
17. ಪಕ್ಷಿಗಳು ಗೂಡುಗಳನ್ನು ಆ ಮರಗಳಲ್ಲಿ ಕಟ್ಟಿಕೊಳ್ಳುತ್ತವೆ. [QBR2] ದೊಡ್ಡ ಕೊಕ್ಕರೆಗಳು ತುರಾಯಿ ಮರಗಳಲ್ಲಿ ಜೀವಿಸುತ್ತವೆ. [QBR]
18. ಎತ್ತರವಾದ ಬೆಟ್ಟಗಳು ಕಾಡುಕುರಿಗಳಿಗೆ ವಾಸಸ್ಥಳವಾಗಿವೆ. [QBR2] ದೂಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯಸ್ಥಾನಗಳಾಗಿವೆ.
19. ವಿಶೇಷಕಾಲಗಳ ಸೂಚನೆಗಾಗಿ ನೀನು ನಮಗೆ ಚಂದ್ರನನ್ನು ಕೊಟ್ಟಿರುವೆ. [QBR2] ಸೂರ್ಯನಿಗೆ ತಾನು ಮುಳುಗತಕ್ಕ ಸಮಯವು ಯಾವಾಗಲೂ ತಿಳಿದಿದೆ. [QBR]
20. ನೀನು ಕತ್ತಲೆಯನ್ನು ರಾತ್ರಿಯನ್ನಾಗಿ ಮಾಡಿದೆ. [QBR2] ಕಾಡುಪ್ರಾಣಿಗಳು ರಾತ್ರಿಯಲ್ಲಿ ಹೊರಬಂದು ಸುತ್ತಮುತ್ತ ಓಡಾಡುತ್ತವೆ. [QBR]
21. ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ [QBR2] ದೇವರನ್ನು ಕೇಳಿಕೊಳ್ಳುತ್ತಿವೆಯೊ ಎಂಬಂತೆ ಬರ್ಜಿಸುತ್ತವೆ. [QBR]
22. ಸೂರ್ಯನು ಮೇಲೇರುವಾಗ, [QBR2] ಪ್ರಾಣಿಗಳು ತಮ್ಮ ಗುಹೆಗಳಿಗೆ ಹೋಗಿ ವಿಶ್ರಮಿಸಿಕೊಳ್ಳುತ್ತವೆ. [QBR]
23. ಬಳಿಕ ಜನರು ಕೆಲಸಕಾರ್ಯಗಳಿಗಾಗಿ ಹೊರಟು [QBR2] ಸಾಯಂಕಾಲದವರೆಗೂ ದುಡಿಯುವರು.
24. ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. [QBR2] ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. [QBR2] ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು. [QBR]
25. ಇಗೋ ವಿಶಾಲವಾದ ಸಮುದ್ರವನ್ನು ನೋಡು. [QBR2] ಅದರೊಳಗೆ ಅನೇಕ ಬಗೆಯ ದೊಡ್ಡ ಜೀವಿಗಳೂ [QBR2] ನಾನಾ ಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ. [QBR]
26. ನೀನು ಸೃಷ್ಟಿಸಿದ ಲಿವ್ಯಾತಾನನು ಸಮುದ್ರದಲ್ಲಿ ಆಟವಾಡುತ್ತಿದ್ದರೂ [QBR2] ಹಡಗು ಸಮುದ್ರದ ಮೇಲೆ ಸಂಚರಿಸುವುದು.
27. ಈ ಜೀವಿಗಳೆಲ್ಲಾ ನಿನ್ನನ್ನು ಅವಲಂಭಿಸಿಕೊಂಡಿವೆ. [QBR2] ಅವುಗಳಿಗೆ ಸರಿಸಮಯದಲ್ಲಿ ಆಹಾರವನ್ನು ಕೊಡುವಾತನು ನೀನೇ. [QBR]
28. ಸರ್ವಜೀವಿಗಳಿಗೆ ಆಹಾರವನ್ನು ಕೊಡುವಾತನು ನೀನೇ. [QBR2] ನೀನು ಕೈತೆರೆದು ಒಳ್ಳೆಯ ಆಹಾರವನ್ನು ಕೊಡಲು ಅವು ತಿಂದು ತೃಪ್ತಿಯಾಗುತ್ತವೆ. [QBR]
29. ನೀನು ಅವುಗಳಿಗೆ ವಿಮುಖನಾದಾಗ [QBR2] ಅವು ಭಯಗೊಳ್ಳುತ್ತವೆ. [QBR] ಅವುಗಳ ಶ್ವಾಸವು ಹೋಗಿ [QBR2] ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ. [QBR]
30. ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. [QBR2] ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.
31. ಯೆಹೋವನ ಮಹಿಮೆಯು ಶಾಶ್ವತವಾಗಿರಲಿ! [QBR2] ಯೆಹೋವನು ತಾನು ಸೃಷ್ಟಿಸಿದವುಗಳಲ್ಲಿ ಆನಂದಿಸಲಿ. [QBR]
32. ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, [QBR2] ಭೂಮಿಯು ನಡುಗುವುದು; [QBR] ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, [QBR2] ಅವು ಜ್ವಾಲಾಮುಖಿಗಳಾಗುತ್ತವೆ.
33. ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು. [QBR2] ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು. [QBR]
34. ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ. [QBR2] ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು. [QBR]
35. ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ. [QBR2] ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. [QBR] ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು! [PE]