1. ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಹೆಸರನ್ನು ಆರಾಧಿಸಿರಿ. ಆತನ ಅದ್ಭುತಕಾರ್ಯಗಳ ಕುರಿತು ಜನಾಂಗಗಳಿಗೆ ಸಾರಿ ಹೇಳಿರಿ.
|
5. ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ ಆತನ ಮಹತ್ಕಾರ್ಯಗಳನ್ನೂ ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ.
|
8. ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.
|
10. ಆತನು ಅದನ್ನು ಯಾಕೋಬನಿಗೆ ಕಟ್ಟಳೆಯನ್ನಾಗಿ ಮಾಡಿದನು. ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು.
|
12. ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ, ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು.
|
14. ಆದರೆ ಅವರಿಗೆ ಯಾರಿಂದಲೂ ಅನ್ಯಾಯವಾಗದಂತೆ ನೋಡಿಕೊಂಡನು. ಅವರನ್ನು ನೋಯಿಸಕೂಡದೆಂದು ಆತನು ರಾಜರುಗಳಿಗೆ ಎಚ್ಚರಿಕೆ ನೀಡಿದನು.
|
15. “ನಾನು ಆರಿಸಿಕೊಂಡಿರುವ ಜನರಿಗೆ ಕೇಡು ಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.
|
19. ಅವನ ಪ್ರಾವಾದನೆಯು ನೆರವೇರುವವರೆಗೆ ಅವನು ಗುಲಾಮನಾಗಿದ್ದನು. ಯೋಸೇಫನು ಸತ್ಯವಂತನೆಂದು ಯೆಹೋವನ ಸಂದೇಶವು ನಿರೂಪಿಸಿತು.
|
25. ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು.
|
33. ದೇವರು ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡಿದನು. ಅವರ ದೇಶದ ಪ್ರತಿಯೊಂದು ಮರವನ್ನೂ ಆತನು ನಾಶಮಾಡಿದನು.
|
35. ಮಿಡತೆಗಳೂ ಜಿಟ್ಟೆಹುಳುಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು. ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು.
|
37. ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ.
|
39. ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಆಗ್ನಿಸ್ತಂಭವನ್ನು ದಯಪಾಲಿಸಿದನು.
|
40. ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು.
|
44. ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.
|
45. ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.
|