2. ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.
|
4. ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.
|
5. ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.
|
6. ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಆಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!
|
7. ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.
|
8. ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು; ತನ್ನ ಮಹಾಶಕ್ತಿಯನ್ನು ತೋರಿಸುವುದಕ್ಕಾಗಿ ಅವರನ್ನು ರಕ್ಷಿಸಿದನು.
|
9. ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.
|
21. ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.
|
22. ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!
|
23. ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.
|
24. ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.
|
27. ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು.
|
28. ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.
|
34. ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.
|
39. ತಮ್ಮ ಪಾಪಕಾರ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.
|
41. ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.
|
43. ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕ, ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು.
|
44. ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.
|
46. ಅನ್ಯಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು.
|
47. ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
|
48. ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಿದರು.
|