2. ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
|
3. ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
|
4. ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.
|
12. ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ.
|
15. ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
|
16. ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.
|
21. ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
|
24. ಯೆಹೋವನು ಮಾಡಬಲ್ಲಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು.
|
30. ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹುಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು.
|
31. ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
|
34. ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.
|