ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! [QBR2] ಆತನ ಪ್ರೀತಿ ಶಾಶ್ವತವಾದದ್ದು! [QBR]
2. ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. [QBR2] ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು. [QBR]
3. ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; [QBR2] ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
4. ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. [QBR2] ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ. [QBR]
5. ಅವರು ಹಸಿವೆಯಿಂದಲೂ [QBR2] ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು. [QBR]
6. ಆಗ ಅವರು ಯೆಹೋವನಿಗೆ ಮೊರೆಯಿಡಲು [QBR2] ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು. [QBR]
7. ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು. [QBR]
8. ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ [QBR2] ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ. [QBR]
9. ಆತನು ಬಾಯರಿದವರನ್ನು ನೀರಿನಿಂದಲೂ [QBR2] ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು.
10. ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; [QBR2] ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು. [QBR]
11. ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. [QBR2] ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು. [QBR]
12. ಅವರ ಕಾರ್ಯಗಳ ನಿಮಿತ್ತವೇ [QBR2] ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. [QBR] ಅವರು ಎಡವಿಬಿದ್ದರು, [QBR2] ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ. [QBR]
13. ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. [QBR2] ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. [QBR]
14. ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; [QBR2] ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು. [QBR]
15. ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ [QBR2] ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ. [QBR]
16. ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. [QBR2] ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. [QBR2] ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.
17. ಕೆಲವರು ತಮ್ಮ ಪಾಪಗಳಿಂದಲೂ [QBR2] ದೋಷಗಳಿಂದಲೂ ಮೂಢರಾದರು. [QBR]
18. ಆ ಜನರು ಊಟವನ್ನು ನಿರಾಕರಿಸಿದ್ದರಿಂದ [QBR2] ಮರಣಾವಸ್ಥೆಗೆ ಬಂದರು. [QBR]
19. ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. [QBR2] ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. [QBR]
20. ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. [QBR2] ಸಮಾಧಿಯಿಂದ ತಪ್ಪಿಸಿಕೊಂಡರು. [QBR]
21. ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ [QBR2] ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ. [QBR]
22. ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. [QBR2] ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.
23. ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ [QBR2] ಸಮುದ್ರಯಾನ ಮಾಡಿದರು. [QBR]
24. ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. [QBR2] ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು. [QBR]
25. ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; [QBR2] ಅಲೆಗಳು ದೊಡ್ಡದಾಗತೊಡಗಿದವು. [QBR]
26. ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. [QBR2] ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು. [QBR2]
27. ಅವರು ಅಮಲೇರಿದವರಂತೆ ಎಡವಿಬೀಳತೊಡಗಿದರು; [QBR2] ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು. [QBR]
28. ಆಗ ಅವರು ಯೆಹೋವನಿಗೆ ಮೊರೆಯಿಡಲು [QBR2] ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು. [QBR]
29. ಆತನು ಬಿರುಗಾಳಿಯನ್ನು ನಿಲ್ಲಿಸಿ [QBR2] ಅಲೆಗಳನ್ನು ಶಾಂತಗೊಳಿಸಿದನು. [QBR]
30. ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು. [QBR2] ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು. [QBR]
31. ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ [QBR2] ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. [QBR]
32. ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. [QBR2] ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ.
33. ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; [QBR2] ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು. [QBR]
34. ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, [QBR2] ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು. [QBR]
35. ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು; [QBR2] ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು. [QBR]
36. ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು. [QBR2] ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು. [QBR]
37. ಅವರು ಹೊಲಗಳಲ್ಲಿ ಬೀಜ ಬಿತ್ತಿ [QBR2] ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು. [QBR]
38. ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. [QBR2] ಅವರ ಪಶುಗಳು ಅಸಂಖ್ಯಾತಗೊಂಡವು. [QBR]
39. ವಿಪತ್ತುಗಳಿಂದಲೂ ತೊಂದರೆಗಳಿಂದಲೂ [QBR2] ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು. [QBR]
40. ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; [QBR2] ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು. [QBR]
41. ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. [QBR2] ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು. [QBR]
42. ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. [QBR2] ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. [QBR]
43. ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು [QBR2] ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 107 / 150
1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!
2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು. 4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.
5 ಅವರು ಹಸಿವೆಯಿಂದಲೂ ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು.
6 ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.
7 ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.
8 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
9 ಆತನು ಬಾಯರಿದವರನ್ನು ನೀರಿನಿಂದಲೂ ಹಸಿದವರನ್ನು ಮೃಷ್ಟಾನ್ನದಿಂದಲೂ ತೃಪ್ತಿಗೊಳಿಸುವನು. 10 ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.
11 ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.
12 ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು.
ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ.
13 ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
14 ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.
15 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
16 ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು. 17 ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.
18 ಆ ಜನರು ಊಟವನ್ನು ನಿರಾಕರಿಸಿದ್ದರಿಂದ ಮರಣಾವಸ್ಥೆಗೆ ಬಂದರು.
19 ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
20 ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು.
21 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
22 ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ. 23 ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ ಸಮುದ್ರಯಾನ ಮಾಡಿದರು.
24 ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು.
25 ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು.
26 ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು. 27 ಅವರು ಅಮಲೇರಿದವರಂತೆ ಎಡವಿಬೀಳತೊಡಗಿದರು; ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು.
28 ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
29 ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು.
30 ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು.
31 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.
32 ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ. 33 ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು.
34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.
35 ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು; ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು.
36 ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು. ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು.
37 ಅವರು ಹೊಲಗಳಲ್ಲಿ ಬೀಜ ಬಿತ್ತಿ ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.
38 ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.
39 ವಿಪತ್ತುಗಳಿಂದಲೂ ತೊಂದರೆಗಳಿಂದಲೂ ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು.
40 ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು.
41 ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.
42 ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.
43 ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 107 / 150
×

Alert

×

Kannada Letters Keypad References