5. ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.
|
6. ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
|
7. ನ್ಯಾಯವಿಚಾರಣೆಯಲ್ಲಿ ನ್ಯಾಯಧೀಶನು ಅವನನ್ನು ಅಪರಾಧಿಯೆಂದು ನಿರ್ಣಯಿಸಲಿ. ನನ್ನ ಶತ್ರುವಿನ ಪ್ರತಿವಾದವು ಅವನಿಗೆ ಮತ್ತಷ್ಟು ಕೇಡು ಮಾಡಲಿ.
|
11. ಅವನಿಗೆ ಸಾಲಕೊಟ್ಟವರು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ. ಅವನು ದುಡಿದು ಸಂಪಾದಿಸಿದ್ದೆಲ್ಲವನ್ನು ಪರರು ಸುಲಿದುಕೊಳ್ಳಲಿ.
|
16. ಯಾಕಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.
|
17. ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಆ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆಶೀರ್ವದಿಸಲೇ ಇಲ್ಲ.
|
21. ಯೆಹೋವನೇ, ನೀನೇ ನನ್ನ ಒಡೆಯನು. ಆದ್ದರಿಂದ ನಿನ್ನ ಹೆಸರಿನ ಘನತೆಗಾಗಿ ನನಗೆ ಸಹಾಯಮಾಡು. ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು.
|
28. ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೊ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.
|
31. ಯಾಕಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು.
|