ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. [QBR2] ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?
2. ದುಷ್ಟರು ಬೇಟೆಗಾರರಂತಿದ್ದಾರೆ; [QBR2] ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; [QBR2] ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು. [QBR]
3. ಅಸ್ತಿವಾರಗಳೇ ನಾಶವಾಗುತ್ತಿದ್ದರೆ [QBR2] ನೀತಿವಂತನು ಏನು ಮಾಡಲಾದೀತು?
4. ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. [QBR2] ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು [QBR] ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. [QBR2] ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ. [QBR]
5. ಯೆಹೋವನು ನೀತಿವಂತರಿಗಾಗಿ ಹುಡುಕುವನು. [QBR2] ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು. [QBR]
6. ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. [QBR2] ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ. [QBR]
7. ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. [QBR2] ನೀತಿವಂತರು ಆತನ ಮುಖವನ್ನು ನೋಡುವರು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
1 ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ? 2 ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
3 ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು? 4 ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು
ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
5 ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.
6 ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.
7 ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
×

Alert

×

Kannada Letters Keypad References