1. ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?
|
2. ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.
|
4. ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
|
7. ಯಾಕಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ. ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.
|