1. ರಚನೆಗಾರ : ದಾವೀದ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.
|
2. ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.
|
3. ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿ ಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.
|
4. ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕ ನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.
|
6. ಆತನು ಜನಾಂಗಗಳಿಗೆ ತೀರ್ಪುಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
|