ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರವಾಗಲಿ! [QBR] ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ [QBR2] ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. [QBR]
2. ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. [QBR2] ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು. [QBR]
3. ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. [QBR2] ಆತನ ನೀತಿಯು ಶಾಶ್ವತವಾದದ್ದು. [QBR]
4. ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ [QBR2] ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ. [QBR]
5. ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; [QBR2] ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. [QBR]
6. ಆತನು ಅನ್ಯಜನಾಂಗಗಳ ದೇಶವನ್ನು [QBR2] ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ. [QBR]
7. ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. [QBR2] ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. [QBR]
8. ದೇವರ ಆಜ್ಞೆಗಳು ಶಾಶ್ವತವಾಗಿವೆ. [QBR2] ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ. [QBR]
9. ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. [QBR2] ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ. [QBR]
10. ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. [QBR2] ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. [QBR] ಆತನಿಗೆ ಸದಾಕಾಲ ಸ್ತೋತ್ರವಾಗಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
ಕೀರ್ತನೆಗಳು 111:136
1 ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು. 2 ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. ಜನರು ಅವುಗಳಲ್ಲಿ ಸಂತೋಷಿಸುತ್ತಾ ಅವುಗಳನ್ನೇ ಧ್ಯಾನಿಸುವರು. 3 ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. ಆತನ ನೀತಿಯು ಶಾಶ್ವತವಾದದ್ದು. 4 ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ. 5 ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. 6 ಆತನು ಅನ್ಯಜನಾಂಗಗಳ ದೇಶವನ್ನು ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ. 7 ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. 8 ದೇವರ ಆಜ್ಞೆಗಳು ಶಾಶ್ವತವಾಗಿವೆ. ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ. 9 ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ. 10 ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
Common Bible Languages
West Indian Languages
×

Alert

×

kannada Letters Keypad References