ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.
2. ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು.
3. ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು.
4. ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ, ದಯಾಮಯನೂ, ಕೃಪಾಮಯನೂ ಆಗಿದ್ದಾನೆ.
5. ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.
6. ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.
7. ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.
8. ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು.
9. ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.
10. ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.

Notes

No Verse Added

Total 150 Chapters, Current Chapter 112 of Total Chapters 150
ಕೀರ್ತನೆಗಳು 112:4

×

Alert

×

kannada Letters Keypad References