1. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ [QBR2] ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ. [QBR]
2. ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ [QBR2] ವಿಧೇಯರಾಗುವವರು ಧನ್ಯರು. [QBR]
3. ಅವರು ಕೆಟ್ಟದ್ದನ್ನು ಮಾಡದೆ [QBR2] ಆತನಿಗೆ ವಿಧೇಯರಾಗಿರುವರು. [QBR]
4. ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. [QBR2] ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ. [QBR]
5. ನಿನ್ನ ಕಟ್ಟಳೆಗಳಿಗೆ [QBR2] ನಾನು ಯಾವಾಗಲೂ ವಿಧೇಯನಾಗಿದ್ದರೆ, [QBR]
6. ನಿನ್ನ ಆಜ್ಞೆಗಳನ್ನು ಕಲಿಯುವಾಗ [QBR2] ನನಗೆ ನಾಚಿಕೆಯಾಗದು. [QBR]
7. ನಾನು ನಿನ್ನ ನ್ಯಾಯವನ್ನೂ [QBR2] ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು. [QBR]
8. ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿದ್ದೇನೆ. [QBR2] ದಯವಿಟ್ಟು ನನ್ನನ್ನು ಕೈಬಿಡಬೇಡ! [QBR]
9. ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? [QBR2] ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ. [QBR]
10. ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; [QBR2] ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು. [QBR]
11. ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ [QBR2] ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. [QBR]
12. ಯೆಹೋವನೇ, ನಿನಗೆ ಸ್ತೋತ್ರವಾಗಲಿ. [QBR2] ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QBR]
13. ನನ್ನ ತುಟಿಗಳು [QBR2] ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ. [QBR]
14. ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ [QBR2] ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು. [QBR]
15. ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು [QBR2] ನಿನ್ನ ಜೀವಮಾರ್ಗವನ್ನು ಅನುಸರಿಸುವೆನು. [QBR]
16. ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, [QBR2] ನಿನ್ನ ಮಾತುಗಳನ್ನು ಮರೆಯುವುದಿಲ್ಲ.
17. ನಿನ್ನ ಸೇವಕನಾದ ನನಗೆ ದಯೆತೋರು. [QBR2] ಆಗ ನಾನು ಜೀವದಿಂದಿದ್ದು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. [QBR]
18. ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; [QBR2] ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ. [QBR]
19. ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. [QBR2] ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ. [QBR]
20. ನಿನ್ನ ನಿರ್ಧಾರಗಳನ್ನು ತಿಳಿದುಕೊಳ್ಳಲು [QBR2] ಯಾವಾಗಲೂ ನಾನು ಹಂಬಲಿಸುತ್ತಿದ್ದೇನೆ. [QBR]
21. ನೀನು ಗರ್ವಿಷ್ಠರನ್ನು ಖಂಡಿಸುವೆ. [QBR2] ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ. [QBR]
22. ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. [QBR2] ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ. [QBR]
23. ನಾಯಕರುಗಳು ಸಹ ನನ್ನನ್ನು ದೂಷಿಸಿದರು. [QBR2] ನಾನು ನಿನ್ನ ಸೇವಕ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನಿಸುವೆ. [QBR]
24. ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. [QBR2] ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು.
25. ನನಗೆ ಸಾವು ಸಮೀಪಿಸಿದೆ. [QBR2] ಯೆಹೋವನೇ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QBR]
26. ನನ್ನ ಜೀವಿತದ ಬಗ್ಗೆ ನಿನ್ನೊಂದಿಗೆ ಹೇಳಿಕೊಂಡೆ. [QBR2] ಆಗ ನೀನು ನನಗೆ ಉತ್ತರಿಸಿದೆ. [QBR2] ಈಗ ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QBR]
27. ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. [QBR2] ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು. [QBR]
28. ನಾನು ದುಃಖಗೊಂಡಿರುವೆ ಮತ್ತು ಆಯಾಸಗೊಂಡಿರುವೆ. [QBR2] ನೀನು ನನ್ನನ್ನು ಜ್ಞಾಪಿಸಿಕೊಂಡು ಮತ್ತೆ ಬಲಗೊಳಿಸು. [QBR]
29. ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. [QBR2] ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು. [QBR]
30. ನಾನು ಸತ್ಯಮಾರ್ಗವನ್ನು ಆರಿಸಿಕೊಂಡಿದ್ದೇನೆ. [QBR2] ನಿನ್ನ ಜ್ಞಾನದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತಿಳಿದುಕೊಳ್ಳುವೆನು. [QBR]
31. ನಿನ್ನ ಒಡಂಬಡಿಕೆಗೆ ಅಂಟಿಕೊಂಡಿದ್ದೇನೆ. [QBR2] ನನ್ನನ್ನು ನಿರಾಶೆಗೊಳಿಸಬೇಡ. [QBR]
32. ನಿನ್ನ ಆಜ್ಞೆಗಳಿಗೆ ಹರ್ಷದಿಂದ ವಿಧೇಯನಾಗುವೆನು. [QBR2] ನಿನ್ನ ಆಜ್ಞೆಗಳು ನನ್ನನ್ನು ಉಲ್ಲಾಸಗೊಳಿಸುತ್ತವೆ.
33. ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, [QBR2] ಆಗ ಅವುಗಳನ್ನು ಅನುಸರಿಸುವೆನು. [QBR]
34. ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. [QBR2] ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು. [QBR]
35. ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು. [QBR2] ಆ ಮಾರ್ಗವೇ ನನಗೆ ಬಹು ಇಷ್ಟ. [QBR]
36. ಐಶ್ವರ್ಯದ ಮೇಲೆ ಮನಸ್ಸಿಡದೆ [QBR2] ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು. [QBR]
37. ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. [QBR2] ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು. [QBR]
38. ನಿನ್ನ ಸೇವಕನಾದ ನನಗೆ ನೀನು ಮಾಡಿದ ವಾಗ್ದಾನಗಳನ್ನು ನೆರವೇರಿಸು. [QBR2] ಆಗ ಜನರು ನಿನ್ನನ್ನು ಗೌರವಿಸುವರು. [QBR]
39. ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ. [QBR2] ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ. [QBR]
40. ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. [QBR2] ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.
41. ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. [QBR2] ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು. [QBR]
42. ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. [QBR2] ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ. [QBR]
43. ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. [QBR2] ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ. [QBR]
44. ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು. [QBR]
45. ಯಾಕೆಂದರೆ, ನಿನ್ನ ನಿಯಮಗಳಿಗೆ ವಿಧೇಯನಾಗಲು [QBR2] ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರ ಹಂಗಿಲ್ಲದೆ ನಡೆಯುವೆನು. [QBR]
46. ರಾಜರುಗಳ ಮುಂದೆಯೂ [QBR2] ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು, ನಾಚಿಕೆಪಡುವುದಿಲ್ಲ. [QBR]
47. ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; [QBR2] ಅವು ನನಗೆ ಇಷ್ಟವಾಗಿವೆ. [QBR]
48. ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು. [QBR2] ಅವು ನನಗೆ ಇಷ್ಟವಾಗಿವೆ.
49. ನಿನ್ನ ವಾಗ್ದಾನವನ್ನು ನನಗೋಸ್ಕರ ನೆನಪು ಮಾಡಿಕೊ. [QBR2] ಆ ವಾಗ್ದಾನವೇ ನನ್ನ ನಿರೀಕ್ಷೆಯಾಗಿದೆ. [QBR]
50. ಸಂಕಟಪಡುತ್ತಿರುವಾಗ ನೀನು ನನ್ನನ್ನು ಸಂತೈಸಿದೆ. [QBR2] ನಿನ್ನ ನುಡಿಗಳು ನನ್ನನ್ನು ಉಜ್ಜೀವನಗೊಳಿಸಲಿ. [QBR]
51. ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. [QBR2] ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು. [QBR]
52. ನಿನ್ನ ಜ್ಞಾನದ ನಿರ್ಧಾರಗಳನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವೆ. [QBR2] ಅವು ನನ್ನನ್ನು ಸಂತೈಸುತ್ತವೆ. [QBR]
53. ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು [QBR2] ನಾನು ಕಾಣುವಾಗ ಬಹುಕೋಪಗೊಳ್ಳುವೆ. [QBR]
54. ನನಗಂತೂ, ನಿನ್ನ ಕಟ್ಟಳೆಗಳು [QBR2] ನನ್ನ ಮನೆಯಲ್ಲಿ [*ನನ್ನ ಮನೆಯಲ್ಲಿ ಅಥವಾ “ದೇವಾಲಯದಲ್ಲಿ.”] ಹಾಡುಗಳಾಗಿವೆ. [QBR]
55. ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ [QBR2] ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ. [QBR]
56. ಯಾಕೆಂದರೆ, ನಾನು ನಿನ್ನ ನಿಯಮಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.
57. ಯೆಹೋವನೇ, ನನ್ನ ಪಾಲು ನೀನೇ; ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದೇ ನನ್ನ ಕರ್ತವ್ಯವೆಂದು ನಿರ್ಧರಿಸಿರುವೆ. [QBR]
58. ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. [QBR2] ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು. [QBR]
59. ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ [QBR2] ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ. [QBR]
60. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು [QBR2] ತಡಮಾಡದೆ ಬೇಗನೆ ಹಿಂತಿರುಗಿದೆನು. [QBR]
61. ಗುಂಪಾಗಿ ಸೇರಿದ್ದ ದುಷ್ಟರು ನನ್ನನ್ನು ದೂಷಿಸಿದರೂ [QBR2] ನಿನ್ನ ಉಪದೇಶಗಳನ್ನು ನಾನು ಮರೆಯಲಿಲ್ಲ. [QBR]
62. ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು [QBR2] ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು. [QBR]
63. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. [QBR2] ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ. [QBR]
64. ನಿನ್ನ ಶಾಶ್ವತ ಪ್ರೀತಿಯು ಭೂಮಿಯನ್ನು ತುಂಬಿಕೊಂಡಿದೆ. [QBR2] ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
65. ಯೆಹೋವನೇ, ನಿನ್ನ ವಾಗ್ದಾನಕ್ಕೆ ತಕ್ಕಂತೆ [QBR2] ನಿನ್ನ ಸೇವಕನಿಗೆ ಒಳ್ಳೆಯದನ್ನೇ ಮಾಡಿರುವೆ. [QBR]
66. ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. [QBR2] ನಾನು ನಿನ್ನ ಆಜ್ಞೆಗಳಲ್ಲಿ ಭರವಸವಿಟ್ಟಿರುವೆ. [QBR]
67. ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; [QBR2] ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು. [QBR]
68. ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. [QBR2] ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QBR]
69. ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳು ಹೇಳಿದರು. [QBR2] ನಾನಾದರೋ ನಿನ್ನ ಆಜ್ಞೆಗಳಿಗೆ ಪೂರ್ಣಹೃದಯದಿಂದ ವಿಧೇಯನಾಗಿರುವೆ. [QBR]
70. ಅವರು ಬಹು ಮೂಢರು. [QBR2] ನಾನಾದರೋ ನಿನ್ನ ಉಪದೇಶಗಳನ್ನು ಕಲಿಯುವುದರಲ್ಲಿ ಆನಂದಿಸುವೆ. [QBR]
71. ನಿನ್ನ ಕಟ್ಟಳೆಗಳನ್ನು ಕಲಿಯಲು [QBR2] ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು. [QBR]
72. ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. [QBR2] ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ.
73. ನಿನ್ನ ಕೈಗಳು ನನ್ನನ್ನು ರೂಪಿಸಿದವು. [QBR2] ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು. [QBR]
74. ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವುದರಿಂದ [QBR2] ನಿನ್ನ ಭಕ್ತರು ನನ್ನನ್ನು ಕಂಡಾಗ ಸಂತೋಷಿಸಲಿ. [QBR]
75. ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. [QBR2] ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು. [QBR]
76. ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. [QBR2] ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು. [QBR]
77. ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; [QBR2] ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ. [QBR]
78. ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. [QBR2] ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುವೆನು. [QBR]
79. ನಿನ್ನ ಭಕ್ತರು ನನ್ನ ಬಳಿಗೆ ಹಿಂತಿರುಗಿಬರಲಿ. [QBR2] ನಿನ್ನ ಒಡಂಬಡಿಕೆಯನ್ನು ಅವರು ಕಲಿತುಕೊಳ್ಳಲಿ. [QBR]
80. ನಾನು ನಿನ್ನ ಕಟ್ಟಳೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. [QBR2] ಆಗ ನನಗೆ ಅವಮಾನವಾಗುವುದಿಲ್ಲ.
81. ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. [QBR2] ನಿನ್ನ ವಾಕ್ಯಗಳಲ್ಲಿಯೇ ಭರವಸವಿಟ್ಟಿದ್ದೇನೆ. [QBR]
82. ನಿನ್ನ ವಾಗ್ದಾನಗಳಿಗಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. [QBR2] ನೀನು ಯಾವಾಗ ನನ್ನನ್ನು ಸಂತೈಸುವೆ? [QBR]
83. ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, [QBR2] ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ. [QBR]
84. ನಾನು ಇನ್ನೆಷ್ಟುಕಾಲ ಬದುಕಲಿ? [QBR2] ನನ್ನನ್ನು ಹಿಂಸಿಸುವವರನ್ನು ಯಾವಾಗ ದಂಡಿಸುವಿ? [QBR]
85. ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ [QBR2] ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ. [QBR]
86. ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. [QBR2] ಅವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; [QBR2] ನನಗೆ ಸಹಾಯಮಾಡು! [QBR]
87. ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. [QBR2] ನಾನಾದರೋ ನಿನ್ನ ನಿಯಮಗಳನ್ನು ಮರೆತುಬಿಡಲೇ ಇಲ್ಲ. [QBR]
88. ನಿನ್ನ ಶಾಶ್ವತ ಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸಮಾಡು. [QBR2] ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗುವೆನು.
89. ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. [QBR]
90. ನಿನ್ನ ನಂಬಿಗಸ್ತಿಕೆಯು ತಲತಲಾಂತರಕ್ಕೂ ಇರುವುದು. [QBR2] ನೀನು ಭೂಮಿಯನ್ನು ಸೃಷ್ಟಿಸಿದೆ; ಅದು ಇಂದಿಗೂ ಸ್ಥಿರವಾಗಿ ನಿಂತಿದೆ. [QBR]
91. ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. [QBR2] ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ. [QBR]
92. ನಿನ್ನ ಉಪದೇಶಗಳು ನನಗೆ ಆನಂದಕರವಾಗಿವೆ; [QBR2] ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು. [QBR]
93. ನಾನು ನಿನ್ನ ಆಜ್ಞೆಗಳನ್ನು ಮರೆಯುವುದೇ ಇಲ್ಲ. [QBR2] ಯಾಕೆಂದರೆ ನಾನು ಬದುಕಿರುವುದು ಅವುಗಳಿಂದಲೇ. [QBR]
94. ನಾನು ನಿನ್ನವನು, ನನ್ನನ್ನು ರಕ್ಷಿಸು! [QBR2] ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. [QBR]
95. ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, [QBR2] ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು. [QBR]
96. ನಿನ್ನ ಧರ್ಮಶಾಸ್ತ್ರದ ಹೊರತು [QBR2] ಬೇರೆಲ್ಲವುಗಳಿಗೂ ಮೇರೆಯಿದೆ.
97. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; [QBR2] ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು. [QBR]
98. ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. [QBR2] ಅವು ಯಾವಾಗಲೂ ನನ್ನೊಂದಿಗಿವೆ. [QBR]
99. ನಿನ್ನ ಒಡಂಬಡಿಕೆಯನ್ನು ನಾನು ಧ್ಯಾನಿಸುತ್ತಿರುವುದರಿಂದ [QBR2] ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ. [QBR]
100. ನಾನು ನಿನ್ನ ಆಜ್ಞೆಗಳನ್ನು ಅನುಸರಿಸುವುದರಿಂದ [QBR2] ಹಿರಿಯರಿಗಿಂತ ವಿವೇಕಿಯಾಗಿದ್ದೇನೆ. [QBR]
101. ನನ್ನ ಪಾದಗಳು ಕೆಟ್ಟದಾರಿಗೆ ಹೋಗದಂತೆ ನನ್ನನ್ನು ಕಾಪಾಡು, [QBR2] ಆಗ, ನಾನು ನಿನ್ನ ವಾಕ್ಯವನ್ನೇ ಅನುಸರಿಸುವೆನು. [QBR]
102. ನೀನೇ ನನ್ನ ಉಪಾಧ್ಯಾಯ. [QBR2] ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು. [QBR]
103. ನಿನ್ನ ನುಡಿಗಳು ನನ್ನ ಬಾಯಲ್ಲಿ [QBR2] ಜೇನಿಗಿಂತಲೂ ಸಿಹಿಯಾಗಿವೆ. [QBR]
104. ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, [QBR2] ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.
105. ನಿನ್ನ ವಾಕ್ಯವು ನನ್ನ ಪಾಲಿಗೆ [QBR2] ದೀಪವೂ ದಾರಿಗೆ ಬೆಳಕೂ ಆಗಿದೆ. [QBR]
106. ನಿನ್ನ ವಿಧಿನಿಯಮಗಳು ಒಳ್ಳೆಯವೇ. [QBR2] ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು. [QBR]
107. ಯೆಹೋವನೇ, ನಾನು ಬಹುಕಾಲ ಸಂಕಟಪಟ್ಟಿದ್ದೇನೆ; [QBR2] ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QBR]
108. ಯೆಹೋವನೇ, ನನ್ನ ಸ್ತೋತ್ರವನ್ನು ಸ್ವೀಕರಿಸು. [QBR2] ನಿನ್ನ ವಿಧಿನಿಯಮಗಳನ್ನು ನನಗೆ ಉಪದೇಶಿಸು. [QBR]
109. ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. [QBR2] ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ. [QBR]
110. ದುಷ್ಟರು ನನಗೆ ಬಲೆಯೊಡ್ಡಿದ್ದಾರೆ. [QBR2] ನಾನಾದರೋ ನಿನ್ನ ವಿಧಿನಿಯಮಗಳಿಗೆ ಅವಿಧೇಯನಾಗಲಿಲ್ಲ. [QBR]
111. ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. [QBR2] ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ. [QBR]
112. ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ [QBR2] ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.
113. ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. [QBR2] ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು. [QBR]
114. ನನ್ನ ಆಶ್ರಯವೂ ಗುರಾಣಿಯೂ ನೀನೇ. [QBR2] ಯೆಹೋವನೇ, ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವೆ. [QBR]
115. ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. [QBR2] ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. [QBR]
116. ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. [QBR2] ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ. [QBR]
117. ನನಗೆ ಸಹಾಯಮಾಡು, ಆಗ ನಾನು ರಕ್ಷಿಸಲ್ಪಡುವೆನು. [QBR2] ನಾನು ನಿನ್ನ ಕಟ್ಟಳೆಗಳನ್ನು ಯಾವಾಗಲೂ ಕಲಿಯುತ್ತಿರುವೆನು. [QBR]
118. ನಿನ್ನ ಕಟ್ಟಳೆಗಳನ್ನು ಅನುಸರಿಸದವರನ್ನು ನೀನು ತಳ್ಳಿಬಿಡುವೆ. [QBR2] ಯಾಕೆಂದರೆ, ಅವರು ನಿನಗೆ ದ್ರೋಹ ಮಾಡಿದರು. [QBR]
119. ಭೂಮಿಯ ಮೇಲಿರುವ ದುಷ್ಟರನ್ನು ನೀನು ಕಸದಂತೆ ಕಾಣುವೆ. [QBR2] ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು. [QBR]
120. ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. [QBR2] ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.
121. ನ್ಯಾಯನೀತಿಗಳುಳ್ಳ ಕಾರ್ಯಗಳನ್ನೇ ನಾನು ಮಾಡಿರುವೆ, [QBR2] ಕೆಡುಕರಿಗೆ ನನ್ನನ್ನು ಒಪ್ಪಿಸಿಕೊಡಬೇಡ. [QBR]
122. ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನಮಾಡು. [QBR2] ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶ ಕೊಡಬೇಡ. [QBR]
123. ನಿನ್ನ ರಕ್ಷಣೆಗಾಗಿಯೂ ನಿನ್ನ ಒಳ್ಳೆಯ ಮಾತಿಗಾಗಿಯೂ [QBR2] ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಂಡಿವೆ. [QBR]
124. ನಿನ್ನ ಸೇವಕನಾದ ನನಗೆ ನಿನ್ನ ಶಾಶ್ವತ ಪ್ರೀತಿಯನ್ನು ತೋರಿಸು. [QBR2] ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QBR]
125. ನಾನು ನಿನ್ನ ಸೇವಕ, [QBR2] ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು. [QBR]
126. ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. [QBR2] ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ. [QBR]
127. ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ [QBR2] ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು. [QBR]
128. ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. [QBR2] ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.
129. ನಿನ್ನ ಕಟ್ಟಳೆಗಳು ಆಶ್ಚರ್ಯಕರವಾಗಿವೆ. [QBR2] ಪೂರ್ಣಹೃದಯದಿಂದ ಅವುಗಳನ್ನು ಅನುಸರಿಸುವೆನು. [QBR]
130. ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. [QBR2] ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. [QBR]
131. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ನಿಜವಾಗಿಯೂ ಇಷ್ಟ. [QBR2] ನಾನು ಏದುಸಿರುಬಿಡುತ್ತಾ ಲವಲವಿಕೆಯಿಂದ ನಿನ್ನ ಆಜ್ಞೆಗಳಿಗಾಗಿ ಕಾಯುತ್ತಿದ್ದೇನೆ. [QBR]
132. ನನ್ನನ್ನು ನೋಡಿ ಕರುಣಿಸು. [QBR2] ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು. [QBR]
133. ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಮಾರ್ಗದರ್ಶನ ನೀಡು. [QBR2] ಯಾವ ಕೇಡೂ ನನಗೆ ಸಂಭವಿಸದಿರಲಿ. [QBR]
134. ಕೆಡುಕರಿಂದ ನನ್ನನ್ನು ರಕ್ಷಿಸು. [QBR2] ಆಗ ನಾನು ನಿನ್ನ ನಿಯಮಗಳಿಗೆ ವಿಧೇಯನಾಗುವೆನು. [QBR]
135. ನಿನ್ನ ಸೇವಕನ ಮೇಲೆ ಕರುಣೆಯಿರಲಿ, [QBR2] ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. [QBR]
136. ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ [QBR2] ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.
137. ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ. [QBR2] ನಿನ್ನ ತೀರ್ಪುಗಳು ನ್ಯಾಯವಾಗಿವೆ. [QBR]
138. ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ. [QBR2] ಅವು ನಂಬಿಕೆಗೆ ಯೋಗ್ಯವಾಗಿವೆ. [QBR]
139. ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. [QBR2] ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ. [QBR]
140. ನಿನ್ನ ವಾಗ್ದಾನಗಳು ಪರೀಕ್ಷಿಸಲ್ಪಟ್ಟಿವೆ. [QBR2] ಅವು ನನಗೆ ಪ್ರಿಯವಾಗಿವೆ. [QBR]
141. ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. [QBR2] ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ. [QBR]
142. ನಿನ್ನ ನೀತಿಯು ಶಾಶ್ವತವಾದದ್ದು. [QBR2] ನಿನ್ನ ಉಪದೇಶಗಳು ನಂಬಿಕೆಗೆ ಯೋಗ್ಯವಾಗಿವೆ. [QBR]
143. ಕಷ್ಟಸಂಕಟಗಳು ನನಗೆ ಬಂದಿದ್ದವು. [QBR2] ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ. [QBR]
144. ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ. [QBR2] ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು, ಆಗ ಬದುಕಿಕೊಳ್ಳುವೆನು.
145. ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; [QBR2] ಸದುತ್ತರವನ್ನು ದಯಪಾಲಿಸು. [QBR2] ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು. [QBR]
146. ನಾನು ನಿನಗೇ ಮೊರೆಯಿಟ್ಟಿದ್ದೇನೆ. [QBR2] ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ. [QBR]
147. ಸೂರ್ಯೋದಯದಲ್ಲಿ ಎದ್ದು ನಿನಗೆ ಮೊರೆಯಿಟ್ಟೆನು. [QBR2] ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನೆ. [QBR]
148. ನಿನ್ನ ವಾಕ್ಯವನ್ನು ಧ್ಯಾನಿಸುವುದಕ್ಕಾಗಿ [QBR2] ರಾತ್ರಿಯಲ್ಲಿ ಬಹು ಹೊತ್ತಿನವರೆಗೆ ಎಚ್ಚರವಾಗಿದ್ದೆನು. [QBR]
149. ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. [QBR2] ನಿನ್ನ ನಿಯಮಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QBR]
150. ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. [QBR2] ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ. [QBR]
151. ಯೆಹೋವನೇ, ನೀನು ನನಗೆ ಸಮೀಪವಾಗಿರುವೆ. [QBR2] ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. [QBR]
152. ನಿನ್ನ ಉಪದೇಶಗಳು ಶಾಶ್ವತವಾಗಿವೆ. [QBR2] ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ.
153. ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. [QBR2] ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ. [QBR]
154. ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. [QBR2] ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QBR]
155. ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ [QBR2] ಅವರಿಗೆ ಜಯವಾಗುವುದಿಲ್ಲ. [QBR]
156. ಯೆಹೋವನೇ, ನೀನು ಎಷ್ಟೋ ಕರುಣೆಯುಳ್ಳವನು. [QBR2] ನಿನ್ನ ಚಿತ್ತಾನುಸಾರವಾಗಿ ನನ್ನನ್ನು ಉಜ್ಜೀವನಗೊಳಿಸು. [QBR]
157. ಅನೇಕ ವೈರಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. [QBR2] ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ. [QBR]
158. ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ [QBR2] ನನಗೆ ಅಸಹ್ಯವಾಗುತ್ತದೆ. [QBR]
159. ಯೆಹೋವನೇ, ನಿನ್ನ ನಿಯಮಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. [QBR2] ನಿನ್ನ ಶಾಶ್ವತ ಪ್ರೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. [QBR]
160. ನಿನ್ನ ವಾಕ್ಯಗಳೆಲ್ಲಾ ಸತ್ಯವಾಗಿವೆ. [QBR2] ನಿನ್ನ ನೀತಿಯ ಕಟ್ಟಳೆಗಳು ಶಾಶ್ವತವಾಗಿವೆ.
161. ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. [QBR2] ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು. [QBR]
162. ಮಹಾಭಂಡಾರವನ್ನು ಕಂಡುಕೊಂಡವನಂತೆ [QBR2] ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು. [QBR]
163. ನಾನು ಸುಳ್ಳುಗಳನ್ನು ದ್ವೇಷಿಸುವೆನು! [QBR2] ಅವು ನನಗೆ ಅಸಹ್ಯವಾಗಿವೆ. [QBR2] ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ. [QBR]
164. ನಿನ್ನ ನೀತಿಯ ವಿಧಿನಿಯಮಗಳಿಗಾಗಿ [QBR2] ನಾನು ದಿನಕ್ಕೆ ಏಳು ಸಲ ನಿನ್ನನ್ನು ಕೊಂಡಾಡುವೆನು. [QBR]
165. ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. [QBR2] ಅವರನ್ನು ಯಾವುದೂ ಬೀಳಿಸಲಾರದು. [QBR]
166. ಯೆಹೋವನೇ, ನಿನ್ನ ರಕ್ಷಣೆಗಾಗಿ ಕಾಯ್ದುಕೊಂಡಿದ್ದೇನೆ. [QBR2] ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. [QBR]
167. ನಾನು ನಿನ್ನ ಕಟ್ಟಳೆಗಳನ್ನು ಅನುಸರಿಸಿದೆನು. [QBR2] ಅವು ನನಗೆ ಬಹು ಪ್ರಿಯವಾಗಿವೆ. [QBR]
168. ನಾನು ನಿನ್ನ ಒಡಂಬಡಿಕೆಗೂ ನಿನ್ನ ನಿಯಮಗಳಿಗೂ ವಿಧೇಯನಾಗಿದ್ದೇನೆ. [QBR2] ನನ್ನ ನಡತೆಯೆಲ್ಲಾ ನಿನಗೆ ಗೊತ್ತಿದೆ.
169. ಯೆಹೋವನೇ, ನನ್ನ ಕೂಗಿಗೆ ಕಿವಿಗೊಡು. [QBR2] ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಜ್ಞಾನಿಯನ್ನಾಗಿ ಮಾಡು. [QBR]
170. ನನ್ನ ಪ್ರಾರ್ಥನೆಗೆ ಕಿವಿಗೊಡು. [QBR2] ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ರಕ್ಷಿಸು. [QBR]
171. ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ [QBR2] ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ. [QBR]
172. ನನ್ನ ನಾಲಿಗೆಯು ನಿನ್ನ ವಾಕ್ಯವನ್ನು ಗಾಯನ ಮಾಡಲಿ. [QBR2] ನಿನ್ನ ಆಜ್ಞೆಗಳೆಲ್ಲಾ ನೀತಿಯ ಆಜ್ಞೆಗಳಾಗಿವೆ. [QBR]
173. ನಾನು ನಿನ್ನ ನಿಯಮಗಳನ್ನು ಅನುಸರಿಸಲು ನಿರ್ಧರಿಸಿರುವುದರಿಂದ [QBR2] ಕೈಚಾಚಿ ಸಹಾಯಮಾಡು. [QBR]
174. ನಿನ್ನಲ್ಲಿ ರಕ್ಷಣೆಗಾಗಿ ಪ್ರಾರ್ಥಿಸುವೆ. [QBR2] ನಿನ್ನ ಉಪದೇಶಗಳು ನನ್ನನ್ನು ಸಂತೋಷಗೊಳಿಸುತ್ತವೆ. [QBR]
175. ನಾನು ಜೀವದಿಂದಿದ್ದು ನಿನ್ನನ್ನು ಕೊಂಡಾಡುವಂತೆ ಮಾಡು. [QBR2] ನಿನ್ನ ನಿಯಮಗಳು ನನಗೆ ಸಹಾಯಮಾಡಲಿ. [QBR]
176. ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. [QBR2] ನನಗೋಸ್ಕರ ಹುಡುಕುತ್ತಾ ಬಾ. [QBR] ನಿನ್ನ ಸೇವಕನಾದ ನಾನು [QBR2] ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ. [PE]