1. ರಚನೆಗಾರ : ಸೊಲೋಮೋನ. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
|
2. ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
|
5. ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
|