1. ಯೆಹೋವನಿಗೆ ಸ್ತೋತ್ರವಾಗಲಿ! [QBR2] ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ! [QBR]
2. ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! [QBR2] ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! [QBR]
3. ಯೆಹೋವನಿಗೆ ಸ್ತೋತ್ರ ಮಾಡಿರಿ, ಯಾಕೆಂದರೆ ಆತನು ಒಳ್ಳೆಯವನು. [QBR2] ಆತನ ಹೆಸರನ್ನು ಸ್ತುತಿಸಿರಿ, ಅದು ಮನೋಹರವಾಗಿದೆ.
4. ಯೆಹೋವನು ಯಾಕೋಬನನ್ನು ಆರಿಸಿಕೊಂಡನು. [QBR2] ಇಸ್ರೇಲ್, ಆತನಿಗೆ ಸೇರಿದ್ದು. [QBR]
5. ಯೆಹೋವನು ಮಹೋನ್ನತನೆಂದೂ [QBR2] ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ. [QBR]
6. ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ [QBR2] ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು. [QBR]
7. ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; [QBR2] ಮಿಂಚನ್ನೂ ಮಳೆಯನ್ನೂ ಬರಮಾಡುವನು; [QBR2] ಗಾಳಿಯನ್ನು ಬೀಸಮಾಡುವನು. [QBR]
8. ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು. [QBR]
9. ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು [QBR2] ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು. [QBR]
10. ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. [QBR2] ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು. [QBR]
11. ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; [QBR2] ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು. [QBR]
12. ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.
13. ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! [QBR2] ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು. [QBR]
14. ಯೆಹೋವನು ಜನಾಂಗಗಳನ್ನು ದಂಡಿಸಿದನು. [QBR2] ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು. [QBR]
15. ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ [QBR2] ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು. [QBR]
16. ಆ ಪ್ರತಿಮೆಗಳಿಗೆ ಬಾಯಿಗಳಿದ್ದರೂ ಮಾತಾಡಲಾಗಲಿಲ್ಲ; [QBR2] ಕಣ್ಣುಗಳಿದ್ದರೂ ನೋಡಲಾಗಲಿಲ್ಲ; [QBR]
17. ಆ ಪ್ರತಿಮೆಗಳಿಗೆ ಕಿವಿಗಳಿದ್ದರೂ ಕೇಳಲಾಗಲಿಲ್ಲ; [QBR2] ಮೂಗುಗಳಿದ್ದರೂ ಮೂಸಿನೋಡಲಾಗಲಿಲ್ಲ; [QBR]
18. ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! [QBR2] ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ.
19. ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. [QBR2] ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ. [QBR]
20. ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! [QBR2] ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ. [QBR]
21. ಯೆಹೋವನಿಗೆ ಚೀಯೋನಿನಿಂದಲೂ [QBR2] ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ! [PE]