6. ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದ ಪಡುವೆನೆಂದು ಪ್ರಮಾಣ ಮಾಡುವೆ.
|
7. ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.
|
8. ಬಾಬಿಲೋನೇ, ನೀನು ನಾಶವಾಗುವೆ! ನಿನಗೆ ತಕ್ಕ ದಂಡೆನೆಯನ್ನು ಕೊಡುವವನು ಧನ್ಯನು. ನೀನು ನಮ್ಮನ್ನು ನೋಯಿಸಿದಂತೆ ನಿನ್ನನ್ನೂ ನೋಯಿಸುವವನೇ ಧನ್ಯನು.
|