1. ಯೆಹೋವನೇ, ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
|
2. ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
|
6. ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.
|
7. ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.
|
8. ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
|