ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. [QBR2] ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು. [QBR]
2. ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. [QBR2] ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. [QBR] ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ. [QBR]
3. ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ [QBR2] ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
4. ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ [QBR2] ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ. [QBR]
5. ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; [QBR2] ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು. [QBR]
6. ಯೆಹೋವನೇ ಮಹೋನ್ನತನು. [QBR2] ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. [QBR] ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. [QBR2] ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ. [QBR]
7. ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. [QBR2] ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು. [QBR]
8. ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. [QBR2] ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. [QBR] ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
ಕೀರ್ತನೆಗಳು 138:40
1 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು. 2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ. 3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ. 4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ. 5 ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು. 6 ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ. 7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು. 8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
Common Bible Languages
West Indian Languages
×

Alert

×

kannada Letters Keypad References