2. ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.
|
3. ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.
|
6. ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.
|
9. ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ ಪಶ್ಚಿಮದಿಕ್ಕಿನಲ್ಲಿ ಸಮದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ.
|
11. ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು.
|
14. ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.
|
15. ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.
|
16. ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
|
18. ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.
|
21. ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು. ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು.
|