ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. [QBR2] ಕ್ರೂರಿಗಳಿಂದ ನನ್ನನ್ನು ಕಾಪಾಡು. [QBR2]
2. ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ. [QBR]
3. ಅವರ ನಾಲಿಗೆಗಳು ಸರ್ಪಗಳಂತಿವೆ. [QBR2] ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.
4. ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. [QBR2] ಕ್ರೂರಿಗಳಿಂದ ನನ್ನನ್ನು ಕಾಪಾಡು. [QBR2] ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ. [QBR]
5. ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; [QBR2] ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; [QBR2] ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.
6. ಯೆಹೋವನೇ, ನನ್ನ ದೇವರು ನೀನೇ. [QBR2] ನನ್ನ ಪ್ರಾರ್ಥನೆಗೆ ಕಿವಿಗೊಡು. [QBR]
7. ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. [QBR2] ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ. [QBR]
8. ಯೆಹೋವನೇ, ಆ ದುಷ್ಟರ ದುರಾಶೆಯೂ [QBR2] ದುರಾಲೋಚನೆಯೂ ನೆರವೇರಲು ಬಿಡಬೇಡ.
9. ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. [QBR2] ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು. [QBR]
10. ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು [QBR2] ಬೆಂಕಿಯೊಳಗೆ ಎಸೆದುಬಿಡು; [QBR2] ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು. [QBR]
11. ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. [QBR2] ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು. [QBR]
12. ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. [QBR2] ದೇವರು ಅಸಹಾಯಕರಿಗೆ ಸಹಾಯಮಾಡುವನು. [QBR]
13. ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; [QBR2] ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 140 / 150
ಕೀರ್ತನೆಗಳು 140:94
1 ಯೆಹೋವನೇ, ಕೆಡುಕರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. 2 ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ. 3 ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ. 4 ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ. 5 ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ. 6 ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು. 7 ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ. 8 ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ. 9 ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು. 10 ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು. 11 ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು. 12 ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು. 13 ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 140 / 150
Common Bible Languages
West Indian Languages
×

Alert

×

kannada Letters Keypad References