ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. [QBR2] ನನ್ನ ಪ್ರಾರ್ಥನೆಗೆ ಕಿವಿಗೊಡು. [QBR2] ಬೇಗನೆ ಬಂದು ನನಗೆ ಸಹಾಯಮಾಡು! [QBR]
2. ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ [QBR2] ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.
3. ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ [QBR2] ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು. [QBR]
4. ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. [QBR2] ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. [QBR2] ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ. [QBR]
5. ನೀತಿವಂತನು ನನ್ನನ್ನು ಸರಿಪಡಿಸಿದರೆ [QBR2] ಅದು ನನಗೇ ಒಳ್ಳೆಯದು. [QBR] ನಿನ್ನ ಭಕ್ತರು ನನ್ನನ್ನು ಗದರಿಸಿದರೆ [QBR2] ಅದು ನನಗೇ ಒಳ್ಳೆಯದು. [QBR] ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. [QBR]
6. ಅವರ ಅಧಿಪತಿಗಳು ದೊಬ್ಬಲ್ಪಡಲಿ. [QBR2] ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು.
7. ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ [QBR2] ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ. [QBR]
8. ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. [QBR2] ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. [QBR2] ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ. [QBR]
9. ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. [QBR2] ಅವರ ಬೋನುಗಳಿಂದ ನನ್ನನ್ನು ತಪ್ಪಿಸು. [QBR]
10. ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. [QBR2] ಆಗ ನಾನು ತಪ್ಪಿಸಿಕೊಳ್ಳುವೆನು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
1 ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!
2 ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ. 3 ಯೆಹೋವನೇ, ನನ್ನ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೂ ವಿವೇಚಿಸಿ ನುಡಿಯುವುದಕ್ಕೂ ನನಗೆ ಸಹಾಯ ಮಾಡು.
4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
5 ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು.
ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು.
ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
6 ಅವರ ಅಧಿಪತಿಗಳು ದೊಬ್ಬಲ್ಪಡಲಿ. ನಾನು ಹೇಳಿದ್ದು ಸತ್ಯವೆಂದು ಆಗ ಜನರು ತಿಳಿದುಕೊಳ್ಳುವರು. 7 ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.
8 ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.
9 ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.
10 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
×

Alert

×

Kannada Letters Keypad References