1. ರಚನೆಗಾರ : ದಾವೀದ. ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!
|
4. ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
|
5. ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
|
7. ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.
|
8. ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.
|