3. ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.
|
4. ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಪ್ರಯತ್ನಿಸುತ್ತಿಲ್ಲ.
|
5. ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.
|
6. ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.
|
7. ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.
|