ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನಾನು ಯೆಹೋವನಿಗೆ ಮೊರೆಯಿಡುವೆನು; [QBR2] ಯೆಹೋವನನ್ನು ಕೂಗಿಕೊಳ್ಳುವೆನು. [QBR]
2. ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ [QBR2] ಆತನಿಗೆ ಅರಿಕೆಮಾಡಿಕೊಳ್ಳುವೆನು. [QBR]
3. ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. [QBR2] ನನ್ನ ಆತ್ಮವು ಕುಂದಿಹೋಗಿದೆ. [QBR2] ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.
4. ನಾನು ಸುತ್ತಮುತ್ತ ನೋಡಿದರೂ [QBR2] ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. [QBR] ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. [QBR2] ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ. [QBR]
5. ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. [QBR2] ನನ್ನ ಆಶ್ರಯಸ್ಥಾನವೂ ನೀನೇ, [QBR2] ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು. [QBR]
6. ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. [QBR2] ನೀನು ನನಗೆ ಬೇಕೇಬೇಕು. [QBR] ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. [QBR2] ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ. [QBR]
7. ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. [QBR2] ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು. [QBR] ನೀನು ನನ್ನನ್ನು ಕಾಪಾಡಿದ್ದರಿಂದ [QBR2] ನೀತಿವಂತರು ನನ್ನೊಂದಿಗೆ ಕೊಂಡಾಡುವರು. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 142 / 150
1 ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.
2 ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು.
3 ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ. 4 ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ.
ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.
5 ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.
6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು.
ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.
7 ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ನಿನ್ನ ಹೆಸರನ್ನು ಕೊಂಡಾಡುವೆನು.
ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 142 / 150
×

Alert

×

Kannada Letters Keypad References